ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ಕನೇ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ
ಕಟಪಾಡಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾಪು ತಾಲೂಕು ಘಟಕದ 4 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಸ್ ವಿ ಎಸ್ ಪದವಿ ಪೂರ್ವ ಕಾಲೇಜ್ ಇಲ್ಲಿ ಶನಿವಾರ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು.
ಸಮ್ಮೇಳನದ ಸರ್ವಾಧ್ಯಕ್ಷರಾದ ಬಹುಭಾಷಾ ಸಾಹಿತಿ ಕ್ಯಾಥ್ರಿನ್ ರೊಡ್ರಿಗಸ್ ಸಭಾಧ್ಯಕ್ಷತೆ ವಹಿಸಿದ್ದರು.
ಉದ್ಘಾಟನೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ನಾಸಿಕ್ ಬ್ಯಾಂಡ್, ಚೆಂಡೆ, ಭಾರತ ಸೇವಾದಳ, ಹುಲಿವೇಷ, ಜಾನಪದ ನೃತ್ಯ, ಸ್ಕೌಟ್ ಗೈಡ್ಸ್ ತಂಡ,
ವಿವಿಧ ಶಾಲಾ ಮಕ್ಕಳು, ತಾಲೂಕು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸಾಹಿತ್ಯಾಭಿಮಾನಿಗಳು ಉಪಸ್ಥಿತರಿದ್ದರು.
ಚಿತ್ರಕಲಾ ಪ್ರದರ್ಶನ, ಪುಸ್ತಕ ಪ್ರದರ್ಶನ ಉದ್ಘಾಟನೆಗೊಂಡಿತು.
ಸಮ್ಮಾನ, ಪುಸ್ತಕ ಬಿಡುಗಡೆ : ಗೋವಾ ವಿಮೋಚನಾ ಹೋರಾಟಗಾರ ವಿಠಲ ಕಿಣಿಯವರನ್ನು ಸನ್ಮಾನಿಸಲಾಯಿತು. ಅತಿಥಿಗಳ ಸಮ್ಮುಖ ಲೇಖಕರ ಪುಸ್ತಕಗಳನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ಉಡುಪಿ ಜಿಲ್ಲಾ ಘಟಕದ ಮತ್ತು ಕಾಪು ತಾಲೂಕು ಘಟಕದ ಪದಾಧಿಕಾರಿಗಳು, ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿದ್ದರು.
