ಕಾಪು : ಕಡಲ ಐಸಿರ 2022 ; ಜನ ಸಾಗರ ; ನೃತ್ಯ ಸ್ಪರ್ಧೆ ; ಲೇಸರ್ ಷೋ
Thumbnail
ಕಾಪು : ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ದಿ| ಆರ್ ಡಿ ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ, ಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಕಾಪು ದೀಪಸ್ಥಂಭದ ಬಳಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಕಡಲ ಐಸಿರ 2022 ಕಾರ್ಯಕ್ರಮದಲ್ಲಿ ನೃತ್ಯ ಸ್ಪರ್ಧೆ ವೀಕ್ಷಿಸಲು ಜನ ಸಾಗರವೇ ನೆರೆದಿದ್ದು ಜನಮನ ಸೆಳೆಯಿತು. ಇದರ ಜೊತೆಗೆ ಲೇಸರ್ ಷೋ, ವಿಶೇಷ ಚೇತನ ಮಕ್ಕಳ ನೃತ್ಯ, ಹಾಡು ಸಭಿಕರ ಗಮನ ಸೆಳೆಯಿತು. ಈ ಹಿಂದೆ ಕಾರ್ಯಕ್ರಮಗಳನ್ನು ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು ಈ ಬಾರಿ ಶನಿವಾರ ಮತ್ತು ಆದಿತ್ಯವಾರದಂದು ಆಟದ ಜೊತೆಗೆ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ಫಲಪುಷ್ಪ ಕಲಾ ಸ್ಪರ್ಧೆ- ಪ್ರದರ್ಶನ, ಫುಡ್ ಫೆಸ್ಟಿವಲ್, ಲೇಸರ್ ಷೋ, ರಸಮಂಜರಿ, ಬಲೆ ಬೀಸಿ ಮೀನು ಹಿಡಿಯುವುದು, ಗಾಳ ಹಾಕಿ ಮೀನು ಹಿಡಿಯುವುದು, ಚೆಂಡೆ ಸ್ಪರ್ಧೆ, ಬೀಚ್ ವಾಲಿಬಾಲ್ ಸ್ಪರ್ಧೆ, ಮಹಿಳೆಯರಿಗಾಗಿ ತ್ರೋಬಾಲ್, ಸಂಗೀತ ಕುರ್ಚಿ ಇತ್ಯಾದಿ ಸ್ಪರ್ಧೆಗಳು, ಕೊಳಲು ತಬಲ ತಂಡ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ಧೋನಿ ಸ್ಪರ್ಧೆ, ಗಾಳಿಪಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
Additional image Additional image
17 Dec 2022, 08:32 PM
Category: Kaup
Tags: