ಚಮ್ಮಾರರಿಗೆ ಮತ್ತು ಬೀದಿ ಬದಿಯ ವ್ಯಾಪಾರಸ್ಥರಿಗೆ ಕೊರೊನಾ ತಡೆಗಟ್ಟುವ ಕಿಟ್ ವಿತರಣೆ
ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಇಂದು ಸಂಜೆ ಉಡುಪಿ ನಗರದಲ್ಲಿರುವ ಚಮ್ಮಾರರಿಗೆ ಮತ್ತು ಬೀದಿ ಬದಿಯ ವ್ಯಾಪಾರಸ್ಥರಿಗೆ ಕೊರೊನಾ ತಡೆಗಟ್ಟುವ ಸಲುವಾಗಿ ಮರುಬಳಕೆ ಮಾಡಬಹುದಾದಂತಹ ಬಟ್ಟೆಯ ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಬೂನು ಒಳಗೊಂಡ ಸೇಫ್ಟಿ ಕಿಟ್ ವಿತರಿಸಿ ಜಾಗೃತಿ ಮೂಡಿಸಲಾಯಿತು. ಮಾಸ್ಕ್ ಧಾರಣೆಯಿಂದ ಆಗುವಂತಹ ಲಾಭಗಳು, ಸ್ಯಾನಿಟೈಸರ್ ಬಳಕೆಯ ವಿಧಾನ ಮತ್ತು ಬರುವ ಗ್ರಾಹಕರಲ್ಲಿಯೂ ಅರಿವು ಮೂಡಿಸುವಂತೆ ಅವರಲ್ಲಿ ಸಂಘಟನೆಯ ಸದಸ್ಯರು ವಿನಂತಿ ಮಾಡಿದರು.
ಈ ಸಂದರ್ಭದಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಚಾಲಕ ಗಣೇಶ್ ಪ್ರಸಾದ್ ಜಿ. ನಾಯಕ್, ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು, ಗ್ರಾಮೀಣಾಭಿವೃದ್ಧಿ ಯೋಜನೆ ಸಂಯೋಜಕ ಜಗದೀಶ್ ಶೆಟ್ಟಿ, ತಾಲೂಕು ಸಂಯೋಜಕ ಉದಯ ನಾಯ್ಕ್, ನಗರ ಸಂಯೋಜಕ ನಾಗರಾಜ್ ಭಂಡಾರ್ಕಾರ್ ಮತ್ತು ಯುವ ಘಟಕದ ವೀಕ್ಷಿತ್ ಉಪಸ್ಥಿತರಿದ್ದರು.
ವೋಕಲ್ ಫಾರ್ ಲೋಕಲ್ ಅಭಿಯಾನದ ಅಂಗವಾಗಿ ಸ್ಥಳೀಯರಿಗೆ ಬೆಂಬಲಿಸುವ ಸಲುವಾಗಿ ಮರುಬಳಕೆ ಮಾಡುವಂತಹ ಬಟ್ಟೆಯ ಮಾಸ್ಕ್ ತಯಾರಿಸಲು ಸ್ಥಳೀಯ ಗ್ರಾಮೀಣ ಮಹಿಳೆಗೆ ಸೂಚಿಸಿ ಅವರಿಂದಲೇ ಮಾಸ್ಕ್ ಗಳನ್ನು ಖರೀದಿಸಲಾಗಿತ್ತು.
