ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ
ಕಾರ್ಕಳ : ಇಲ್ಲಿನ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನದ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಹಿಂದಿ ಉಪನ್ಯಾಸಕರಾದ ವಿನಾಯಕ ಜೋಗ್ ವಿವೇಕಾನಂದರ ಚೈತನ್ಯ ಶಕ್ತಿ ಯುವ ಮನಸ್ಸುಗಳಲ್ಲಿ ಮೊಳೆಯಲ. ತನ್ಮೂಲಕ ದೇಶದ ಭವಿತವ್ಯವನ್ನು ,ಸುಭದ್ರ ಭಾರತದ ನಿರ್ಮಾಣ ಮಾಡಲು ಯುವ ಸಮುದಾಯ ಕಾರ್ಯಪ್ರವೃತ್ತವಾಗಲಿ ಎಂದು ಕರೆ ನೀಡಿದರು.
ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ನುಡಿಯುತ್ತಾ ಇಂದಿನ ಕಾಲದಲ್ಲಿ ಯುವಕರೆಲ್ಲರೂ ಒಂದಾಗಿ ಜಗತ್ತಿನ ಪ್ರಮುಖ ಶಕ್ತಿಯಾಗಿ ಬೆಳೆಯಲಿ ಎಂದು ಹಾರೈಸಿದರು.
ವಿದ್ಯಾರ್ಥಿನಿ ವಿಂಧ್ಯಾ ಹೆಗಡೆ ವಿವೇಕಾನಂದರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಉಮೇಶ್, ರಾಮಕೃಷ್ಣ ಹೆಗಡೆ, ರಾಘವೇಂದ್ರ ರಾವ್, ಗಿರೀಶ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕುಮಾರಿ ಅನಘಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
