ಕಾಂಗ್ರೆಸ್ ಪ್ರತಿಯೊಬ್ಬರ ಏಳಿಗೆ ಬಯಸುವ ಪಕ್ಷ : ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ
Thumbnail
ಕಾಪು : ಬೆಂಗಳೂರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯರಾದ ಕೆ. ಅಬ್ದುಲ್ ಜಬ್ಬಾರ್ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ ಭಾಗವಹಿಸಿ ಉಡುಪಿ ಜಿಲ್ಲಾ ಅಲ್ಪ ಸಂಖ್ಯಾತರ ಪರವಾಗಿ ಚರ್ಚೆ ನಡೆಸಿದರು. ಈಗಾಗಲೇ ಚುನಾವಣೆ ಹತ್ತಿರದಲ್ಲಿದ್ದು ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಈಗಾಗಲೇ ಚುನಾವಣೆ ಪ್ರಣಾಳಿಕೆ ಬಿಡುಗಡೆಗೊಳ್ಳುತ್ತಿದೆ. ಜನಸಾಮಾನ್ಯರಿಗೆ ಪ್ರತಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು ಜನರಿಗೆ ತುಂಬಾ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ಜ್ಯಾತ್ಯತೀತ ನೆಲೆಯಲ್ಲಿ ಪ್ರತಿಯೊಬ್ಬರ ಪ್ರಗತಿಯನ್ನು ಬಯಸುತ್ತದೆ ಎಂದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪ ಸಂಖ್ಯಾತ ಸದಸ್ಯರುಗಳು ಉಪಸ್ಥಿತರಿದ್ದರು.
19 Jan 2023, 08:42 PM
Category: Kaup
Tags: