ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗ ದಶಮಾನೋತ್ಸವ - ಕ್ರೀಡೋತ್ಸವ
ಶಿರ್ವ : ಸಮಾಜ ಬೆಳೆಯಬೇಕಿದ್ದರೆ ನಾವು ಸಮಾಜಕ್ಕಾಗಿ ತ್ಯಾಗ ಮಾಡಬೇಕು ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದು ಯುವ ಸಂಗಮದ ಸ್ಥಾಪಕರಾದ ಕಾಪು ಶ್ರೀಕಾಂತ ಆಚಾರ್ಯ
ಅಭಿಪ್ರಾಯ ಪಟ್ಟರು.
ಅವರು ಶಿರ್ವ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಿಶ್ವ ಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗ ಇದರ ದಶಮಾನೋತ್ಸವದ ವತಿಯಿಂದ ಹಮ್ಮಿಕೊಂಡ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿದರು.
ಗೌರವಾಧ್ಯಕ್ಷ ಸುರೇಶ ಆಚಾರ್ಯ, ದಶಮಾನೋತ್ಸವದ ಸಂಚಾಲಕ ಪ್ರಶಾಂತ ಆಚಾರ್ಯ, ಕ್ರೀಡಾಕೂಟದ ಪ್ರಾಯೋಜಕರಾಗಿರುವ ಸೀತಾರಾಮ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಸುಮತಿ ಭಾಸ್ಕರ್ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಹಿಳಾ ಬಳಗದ ಸದಸ್ಯರು ಪ್ರಾರ್ಥಿಸಿದರು.
ಅಧ್ಯಕ್ಷ ಉಮೇಶ್ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಮಾಧವಾಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
