ಜೆಸಿಐ ಉಡುಪಿ : ನೂತನ ಪದಾಧಿಕಾರಿಗಳ ಪದ ಪ್ರಧಾನ
Thumbnail
ಉಡುಪಿ : ಜೆ ಸಿ ಐ ಉಡುಪಿ ಸಿಟಿ ಇದರ ನೂತನ ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭ ಜನವರಿ 31ರಂದು ಉದ್ಯಾವರ ನಿತ್ಯಾನಂದ ಆರ್ಕೆಡ್ ನಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಹೋಂ ಡಾಕ್ಟರ್ ಫೌಂಡೇಶನ್ ಇದರ ಮುಖ್ಯಸ್ಥ ಡಾ|| ಶಶಿಕಿರಣ್ ಶೆಟ್ಟಿ ಸಮಾಜ ಸೇವೆ ಮಾಡಬೇಕಾದರೆ ಹಣ ಅಂತಸ್ತು ಬೇಕಾಗಿಲ್ಲ ಮುಖ್ಯವಾಗಿ ಮಾಡಬೇಕೆಂಬ ಮನಸಿದ್ದರೆ ಸಾಕು ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠವಾದ ಸಂಪತ್ತು ಅದು ಮಾನವನ ವ್ಯಕ್ತಿತ್ವ ಈ ನಿಟ್ಟಿನಲ್ಲಿ ನಾವು ಸೇವಾ ಮನೋಭಾವನೆಯನ್ನು ಬೆಳೆಸಿಕೊಂಡು ಸಮಾಜದ ಪರಿವರ್ತನೆಗೆ ಕಾರಣರಾಗಬೇಕು ಈ ನಿಟ್ಟಿನಲ್ಲಿ ಹೋಮ್ ಡಾಕ್ಟರ್ ಫೌಂಡೇಶನ್ ಮತ್ತು ಜೆಸಿಐ ಉಡುಪಿ ಸಿಟಿ ಕಾರ್ಯನಿರ್ವಹಿಸುತ್ತಿರುವುದು ಉತ್ತಮವಾದ ವಿಚಾರವಾಗಿದೆ ಎಂದರು. ಈ ಸಂದರ್ಭದಲ್ಲಿ ಡಾ|| ಶಶಿಕಿರಣ್ ಶೆಟ್ಟಿ ಮತ್ತು ಟೌನ್ ಪೊಲೀಸ್ ಸ್ಟೇಷನ್ ನ ಸಹಾಯಕ ಪೊಲೀಸ್ ಅಧಿಕಾರಿ ಜಯಕರ ಐರೋಡಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿ ಪೂರ್ವ ರಾಷ್ಟ್ರೀಯ ಉಪಾಧ್ಯಕ್ಷ ಸದಾನಂದ ನಾವಡ ಜೇಸಿ ಸಂಸ್ಥೆಯ ವಿಶೇಷತೆಯ ಬಗ್ಗೆ ಮಾತನಾಡಿದರು. ಪೂವ೯ ರಾಷ್ಟ್ರೀಯ ಉಪಾಧ್ಯಕ್ಷ ಸಂದೀಪ್ ಕುಮಾರ್ ಶುಭ ಹಾರೈಸಿದರು. ವಲಯ ಉಪಾಧ್ಯಕ್ಷೆ ಜಯಶ್ರೀ ಮಿತ್ರ ಕುಮಾರ್ ಪದ ಪ್ರಧಾನ ಸಮಾರಂಭದ ಅಧಿಕಾರಿಯಾಗಿ ಭಾಗವಹಿಸಿದ್ದರು.ವೇದಿಕೆಯಲ್ಲಿ ಅಧ್ಯಕ್ಷತೆಯನ್ನು ಡಾ| ವಿಜಯ್ ನೆಗಳೂರು ವಹಿಸಿ ವರದಿ ವಾಚಿಸಿ , ಎಲ್ಲರಿಗೂ ಗೌರವಿಸಿದರು. ವೇದಿಕೆಯಲ್ಲಿ ಕಾಯ೯ದಶಿ೯ ಕಿರಣ್ ಭಟ್, ಮಹಿಳಾ ಜೇಸಿ ಡಾII ಚಿತ್ರಾ ನೆಗಳೂರು, ಉದಯ್ ನಾಯ್ಕ ಮುಂತಾದವರು ಉಪಸ್ಥಿತರಿದ್ದರು. ನೂತನ ಅಧ್ಯಕ್ಷೆಯಾಗಿ ನೈನಾ ನಾಯಕ್ ಮತ್ತು ಅವರ ತಂಡದ ಪದ ಪ್ರಧಾನ ನೆರವೇರಿತು.ಈ ಸಂದಭ೯ದಲ್ಲಿ ನೂತನ ಸದಸ್ಯರಿಗೆ ಮತ್ತು ಪದಾಧಿಕಾರಿಗಳಿಗೆ ಪ್ರಮಾಣ ವಚನ ಮಾಡಲಾಯಿತು. ನೂತನ ಕಾಯ೯ದಶಿ೯ ಸಂಧ್ಯಾ ಕುಂದರ್ ವಂದಿಸಿದರು. ಪೂವ೯ ಅಧ್ಯಕ್ಷರುಗಳು ಮತ್ತು ಸದಸ್ಯರು ಭಾಗವಹಿಸಿದ್ದರು.
01 Feb 2023, 08:16 PM
Category: Kaup
Tags: