ಕಾಪು : ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವ ಛಾಯಾಗ್ರಹಕ ನಿಧನ
Thumbnail
ಕಾಪು : ಇಲ್ಲಿನ ಪೊಲಿಪುವಿನ ನಿವಾಸಿ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿಯವರು ಗುರುವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರೀತೇಶ್ ರವರು ನಾಲ್ಕು ದಿನದ ಹಿಂದೆ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ತೀವ್ರ ಗಾಯಗೊಂಡ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಅವರನ್ನು ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಗುರುವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಪ್ರೀತೇಶ್ ರವರು ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ. ಪ್ರೀತಿಶ್ ರವರು ಕಾಪು ಛಾಯಾಗ್ರಹಕ ಸಂಘದ ಅಜೀವ ಸದಸ್ಯರಾಗಿದ್ದು, ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು. ಪ್ರೀತೇಶ್ ರವರು ತಂದೆ ತಾಯಿ ಹೆಂಡತಿ ಮಗಳು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಾಪು ಛಾಯಾಗ್ರಾಹಕ ಸಂಘದ ಅಧ್ಯಕ್ಷ ವಿನೋದ್ ಕಾಂಚನ್ ಮತ್ತು ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
09 Feb 2023, 12:37 PM
Category: Kaup
Tags: