ಫೆ.11 : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ; ಚಿಣ್ಣರ ಕಲರವ
Thumbnail
ಮಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಮತ್ತು ತಾಲೂಕು ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಫೆಬ್ರವರಿ11, ಶನಿವಾರ ನಡೆಯಲಿದೆ. ಈ ಮಹತ್ವಪೂರ್ಣ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ್ ಸ್ಕೌಟ್ ಮತ್ತು ಗೈಡ್ನ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ ರಾಜ್ ಕೆ. ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣಕನ್ನಡ ಜಿಲ್ಲಾ ನೂತನ ಅಧ್ಯಕ್ಷೆ ಹಾಗೂ ನ್ಯಾಯವಾದಿ ಪರಿಮಳ ಮಹೇಶ್ ರಾವ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ರಾಂತ ಕನ್ನಡ ಉಪನ್ಯಾಸಕ ಎಸ್.ಪಿ. ಅಜಿತ್ ಪ್ರಸಾದ್, NSCDF ಅಧ್ಯಕ್ಷ ಗಂಗಾಧರ್ ಗಾಂಧಿ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಮತ್ತಿತರರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ದಕ್ಷಿಣ ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಶಾಲಾ ಮಕ್ಕಳಿಂದ ಚಿಣ್ಣರ ಕಲರವ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ರಶ್ಮಿ ಸನಿಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Additional image
10 Feb 2023, 08:39 AM
Category: Kaup
Tags: