ಮಾರ್ಚ್ 11 : ಮಟ್ಟಾರಿನಲ್ಲಿ ಹಿಂದೂ ಹೃದಯ ಸಂಗಮ ; ಕುಮಾರಿ ಹಾರಿಕಾ ಮಂಜುನಾಥ್ ದಿಕ್ಸೂಚಿ ಭಾಷಣ
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ಮಾರ್ಚ್ 11 ರಂದು ಹಿಂದೂ ಹೃದಯ ಸಂಗಮ ಕಾರ್ಯಕ್ರಮ ಶಿರ್ವ ಗ್ರಾಮದ ಮಟ್ಟಾರ್ ನಲ್ಲಿ ಜರಗಲಿದೆ.
ಅಂದು ಸಂಜೆ 3 ಗಂಟೆಗೆ ದಶಮ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ನಡೆಯಲಿದೆ.
ಸಂಜೆ 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಬೆಂಗಳೂರಿನ ಬಾಲವಾಗ್ಮಿ ಕುಮಾರಿ ಹಾರಿಕಾ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಒಡಿಯೂರು ಗುರುದೇವದತ್ತ ಸಂಸ್ಥಾನದ ಪರಮಪೂಜ್ಯ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಅವರು ಆಶೀರ್ವಚನ ನೀಡಲಿದ್ದು ಅನೇಕ ಗಣ್ಯರ ಉಪಸ್ಥಿತಿಯಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ನಡೆಯಲಿದೆ.
ರಾತ್ರಿ 8 ಗಂಟೆಗೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಂತರ ಅನ್ನ ಸಂತರ್ಪಣೆ ಮತ್ತು ಶ್ರೀಕೃಷ್ಣ ಲೀಲೆ-ಕಂಸವಧೆ ಎಂಬ ಕಾಲಮಿತಿಯ ಯಕ್ಷಗಾನ ನಡೆಯಲಿದೆ.
