ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಗಲು ರಥೋತ್ಸವ ರಥಾರೋಹಣ ಸಂಪನ್ನ
ಉಚ್ಚಿಲ : ಇಲ್ಲಿನ ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇಗುಲದ ವಾರ್ಷಿಕ ಹಗಲು ರಥೋತ್ಸವ ಹಾಗೂ ರಥಾರೋಹಣ ಮಂಗಳವಾರ ಮಧ್ಯಾಹ್ನ ಸಂಪನ್ನಗೊಂಡಿತು.
ದೇವಳದ ತಂತ್ರಿ ವರ್ಯರಾದ ಶ್ರೀ ರಾಧಾಕೃಷ್ಣ ಉಪಾಧ್ಯಾಯ, ಆಡಳಿತಾಧಿಕಾರಿ ಕಾಪು ತಹಶಿಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಸಿಬ್ಬಂದಿ ವರ್ಗ, ಅರ್ಚಕರ ಸಹಿತ ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.
ಮಧ್ಯಾಹ್ನ ಅನ್ನಸಂತರ್ಪಣೆಯೂ ನೆರವೇರಿತು.
