ಫೆ. 22ರಿಂದ 25 : ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ನೇಮ
ಕಾಪು : ತಾಲೂಕಿನ ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಫೆಬ್ರವರಿ 22ರಿಂದ 25ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ನೆರವೇರಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿಯವರು ಮಂಗಳವಾರ ಪಣಿಯೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ನೇತೃತ್ವದಲ್ಲಿ ಫೆಬ್ರವರಿ 22ರಿಂದ ಮೊದಲ್ಗೊಂಡು ಫೆಬ್ರವರಿ 25ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ಜರಗಲಿದೆ.
ಪತ್ರಿಕಾಗೋಷ್ಠಿಯಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ, ಸುಕುಮಾರ್ ಶೆಟ್ಟಿ ನಡಿಮನೆ, ಗುತ್ತಿನಾರ್ ಯೋಗೀಶ್ ಶೆಟ್ಟಿ ಮಣಿಯೂರು ಗುತ್ತು, ಕಾರ್ಯದರ್ಶಿ ಗಣೇಶ್ ಶೆಟ್ಟಿ, ಗುರಿಕಾರ ಶಂಕರ ಬಿ. ಪ್ರಚಾರ ಸಮಿತಿಯ ಸತೀಷ್ ಶೆಟ್ಟಿ ಗುಡ್ಡೆಚ್ಚಿ, ರಾಕೇಶ್ ಕುಂಜೂರು ಮತ್ತಿತರರು ಉಪಸ್ಥಿತರಿದ್ದರು.
