ಪಡುಬಿದ್ರಿ : ಟ್ಯಾಂಕರ್ ಅಜಾಗರೂಕತೆ ಚಾಲನೆ ; ಸ್ಕೂಟಿಯಲ್ಲಿದ್ದ ದಂಪತಿಗಳು ಮೃತ್ಯು
Thumbnail
ಪಡುಬಿದ್ರಿ : ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೂಲ್ಕಿ ಸೇತುವೆ ಮೇಲೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ತೀರ್ಥಹಳ್ಳಿಯ ಅಡಿಕೆ ವ್ಯಾಪಾರಿ ದಂಪತಿ ಅಕ್ಬರ್ ಬಾಷಾ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಶಾಂಭವಿ ನದಿಯ ಸೇತುವೆ ಮೇಲೆ ಈ ಘಟನೆ ನಡೆದಿದ್ದು ಟ್ಯಾಂಕರನ್ನು ಹೆಜಮಾಡಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿ ಎದುರುಗಡೆಯಿಂದ ಸೇತುವೆಯ ಮೇಲೆ ಎಡ ಬದಿಯಲ್ಲಿ ಅಕ್ಬರ್ ಬಾಷಾರವರು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು ಅಪಘಾತದಿಂದ ಸ್ಕೂಟರ್ ಸವಾರ ಅಕ್ಬರ್ ಬಾಷಾ ಹಾಗೂ ಸಹ ಸವಾರೆ ಖತೀಜಾಬಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ತೀವ್ರರಕ್ತ ಗಾಯಗೊಂಡು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
07 Mar 2023, 07:43 PM
Category: Kaup
Tags: