ಕಾಪು : ಮಾನವ ಬಂದುತ್ವ ವೇದಿಕೆ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ಮೀನು ಮಾರಾಟದ ಮಹಿಳೆಯರಿಗೆ ‌ಸನ್ಮಾನ
Thumbnail
ಕಾಪು : ಮಾನವ ಬಂದುತ್ವ ವೇದಿಕೆ ಕರ್ನಾಟಕ ಇದರ ಉಡುಪಿ ಜಿಲ್ಲಾ ಸಂಚಲನ ಸಮಿತಿ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಇಂದು ಮೀನು ಮಾರಾಟ ಮಾಡುವ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಕಾಪು ಮೀನು ಮಾರುಕಟ್ಟೆಯಲ್ಲಿ ಜರಗಿತು. ಈ ಸಂದರ್ಭ ಮಾತನಾಡಿದ ಮಾಜಿ‌ ಸಚಿವರಾದ ವಿನಯಕುಮಾರ್ ಸೊರಕೆ ಮನೆಯ ಜೊತೆಗೆ ತಮ್ಮ ವೃತ್ತಿಯನ್ನು ನಿಭಾಯಿಸಿಕೊಂಡು ಬದುಕು ಕಟ್ಟುವ ಕಾಯದಲ್ಲಿರುವ ಮೀನುಗಾರರ ಮತ್ತು ಮೀನುಗಾರರ ಮಹಿಳೆಯರ ಉದ್ಯಮದ ಕಷ್ಟಗಳನ್ನು ಸ್ಮರಿಸಿಕೊಂಡರು. ಮಂಗಳೂರು ವಿಭಾಗದ ಸಂಚಾಲಕ ಪತ್ರಕರ್ತ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾನವ ಬಂಧುತ್ವ ಕರ್ನಾಟಕ ವೇದಿಕೆ ಇದರ ರಾಜ್ಯ ಸಮಿತಿ ಸದಸ್ಯ ರೋನಾಲ್ಡ್ ಮನೋಹರ್ ಕರ್ಕಡ, ಪ್ರಮುಖರಾದ ಮಂಜಿತ್ ನಾಗರಾಜ್, ಮಹಮದ್ ಶೀಶ್, ಅಶ್ವಿನಿ, ಚಾಲ್ಸ್ ಅಂಬ್ಲರ್, ಕಾಪು ಮೀನು ಮಾರಾಟ ಸಂಘದ ಅಧ್ಯಕ್ಷ ಶಾಂತ ಸುವರ್ಣ, ಕಾರ್ಯದರ್ಶಿ ಶಶಿಕಲಾ, ಕಾಪು ಪುರಸಭಾ ಸದಸ್ಯರಾದ ಸತೀಶ್ ಚಂದ್ರ, ಫರ್ಜಾನ, ಶೋಭಾ ಬಂಗೇರ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಮುಖರಾದ ಎಂಎ ಗಪುರ್, ಉಸ್ಮಾನ್, ಫಾರೂಕ್ ಚಂದ್ರನಗರ, ಹರೀಶ್ ನಾಯಕ್, ದೀಪಕ್ ಕುಮಾರ್ ಎರ್ಮಳ್, ಜಹೀರ್ ಅಹ್ಮದ್, ಸರ್ಫುದ್ದೀನ್ ಶೇಕ್ ಮತ್ತಿತರರು ಉಪಸ್ಥಿತರಿದ್ದರು.
08 Mar 2023, 07:22 PM
Category: Kaup
Tags: