ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ : ನಿಷೇಧಾಜ್ಞೆ
Thumbnail
ಉಡುಪಿ : ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 9 ರಿಂದ 29 ರ ವರೆಗೆ ಜಿಲ್ಲೆಯ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144 (1) ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
08 Mar 2023, 11:39 PM
Category: Kaup
Tags: