ಮಾಚ್೯ 11 ರಿಂದ 14 : ಕಟಪಾಡಿ‌ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ; ಕಾಲಾವಧಿ ಜಾತ್ರೆ
Thumbnail
ಕಟಪಾಡಿ : ಇಲ್ಲಿನ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ನಡೆಯುವ ಕಾಲಾವಧಿ ಜಾತ್ರೆ ಹಾಗೂ ದೃಢಕಲಶ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಮಾಚ್೯ 11ರಿಂದ ಮಾಚ್೯ 14 ರವರೆಗೆ ಜರಗಲಿದೆ. ಮಾರ್ಚ್ 11 ಸಂಜೆ 4 ಗಂಟೆಗೆ ಮೂಲ ಗುಪ್ಫೆಯಿಂದ ಮಣ್ಣು ತರುವುದು. ಸಂಜೆ 6 ಗಂಟೆಗೆ ಗರಡಿ ಪ್ರವೇಶ. ರಾತ್ರಿ ಗಂಟೆ 7.05 ರಿಂದ ಪುಣ್ಯಾಹ, ವಾಸ್ತು ಹೋಮ ಇತ್ಯಾದಿ ನೆರವೇರಲಿದೆ. ಮಾರ್ಚ್ 12ರಂದು ಪೂರ್ವಾಹ್ನ ಗಂಟೆ 9.05 ರಿಂದ ದೃಢಕಲಶ, ಪೂರ್ವಾಹ್ನ ಗಂಟೆ 11.43ಕ್ಕೆ ಧ್ವಜಾರೋಹಣ, ಹಸಿರುವಾಣಿ ಸಮರ್ಪಣೆ, ರಾತ್ರಿ ಗಂಟೆ 7ಕ್ಕೆ ಅಗೆಲು ಸೇವೆ ನಡೆಯಲಿದೆ. ಮಾರ್ಚ್ 13 ಸಂಜೆ ಗಂಟೆ 6.30 ಕ್ಕೆ ಬೈದೆರುಗಳ ನೇಮೋತ್ಸವ ಜರಗಲಿದೆ. ಮಾರ್ಚ್ 14 ಸಂಜೆ ಗಂಟೆ 3 ಕ್ಕೆ ಮಾಯಂದಾಲ್ ನೇಮ, ಸಂಜೆ ಗಂಟೆ 8 ಕ್ಕೆ ಪರಿವಾರ ದೈವದ ನೇಮ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
11 Mar 2023, 06:44 PM
Category: Kaup
Tags: