ಕಾಪು : ಬೈಕ್ - ಆಂಬುಲೆನ್ಸ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಮೃತ್ಯು
Thumbnail
ಕಾಪು : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಬೈಕ್ ಮತ್ತು ಆಂಬುಲೆನ್ಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಗಂಭೀರ ಗಾಯಗೊಂಡು ಜೀವನ್ಮರಣದ ಸ್ಥಿತಿಯಲ್ಲಿದ್ದ ಬೈಕ್ ಸವಾರ ಉಚ್ಚಿಲದ ರಿತೇಶ್ ದೇವಾಡಿಗರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಸಾವನ್ನಪ್ಪಿದ್ದಾರೆ. ಉಚ್ಚಿಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಈ ಬಗ್ಗೆ ಕಾಪು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ನೀಡಿದ್ದಾರೆ. ಶನಿವಾರ ಇದೇ ಸ್ಥಳದ ಪಕ್ಕದಲ್ಲಿ ರಸ್ತೆ ದಾಟಲು ನಿಂತಿದ್ದ ಶಾಲಾ ಬಾಲಕಿಗೆ ಬಸ್ಸೊಂದು ಗುದ್ದಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಮಾಸುವ ಮುನ್ನ ಇನ್ನೊಂದು ಘಟನೆ ನಡೆದಿದೆ. ಆಮೆಗತಿಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿಯಿಂದ ಅಪಘಾತಗಳು ಸಂಭವಿಸುತ್ತಿವೆ ಆದಷ್ಟು ಬೇಗ ಕಾಮಗಾರಿ ಮುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
12 Mar 2023, 05:55 PM
Category: Kaup
Tags: