ಬಂಟಕಲ್ಲು : ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ - ಸಂತಾಪ ಸೂಚಕ ಸಭೆ
Thumbnail
ಬಂಟಕಲ್ಲು : ಹೊನ್ನಾವರದಲ್ಲಿ ಶುಕ್ರವಾರ ರಸ್ತೆ ಅಪಘಾತದಿಂದ ಸಾವನ್ನಪ್ಪಿದ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್ ರಿಗೆ ಸಂತಾಪ ಸೂಚಕ ಸಭೆ ಶನಿವಾರ ಜರಗಿತು. ಈ ಸಂದರ್ಭ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್ ಮೆಕ್ಯಾನಿಕಲ್ ವಿಭಾಗದಲ್ಲಿ ಉತ್ತಮ ಪ್ರಾಧ್ಯಾಪಕನಾಗಿ ಸಂಸ್ಥೆಯ ಬಗೆಗಿನ ಅಪಾರ ಪ್ರೀತಿ ಮತ್ತು ಮಕ್ಕಳ ಬಗ್ಗೆ ಕಾಳಜಿ ಹೊಂದಿರತಕ್ಕಂತಹ ಅನಂತೇಶರ ಅಗಲುವಿಕೆ ಸಂಸ್ಥೆಗೆ, ಮಕ್ಕಳಿಗೆ ನೋವನ್ನುಂಟು ಮಾಡಿದೆ. ಅವರನ್ನು ಕಳೆದು ಕೊಂಡಂತಹ ಅವರ ಕುಟುಂಬ ವರ್ಗಕ್ಕೆ ನೋವನ್ನು ಭರಿಸುವ ಶಕ್ತಿ ಭಗವಂತನು ಕರುಣಿಸಲಿ ಎಂದು ಹೇಳಿದರು. ಈ ಸಂದರ್ಭ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್, ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ, ಉಪಪ್ರಾಂಶುಪಾಲರು, ಪ್ರಾಧ್ಯಾಪಕ ವೃಂದ, ವಿದ್ಯಾರ್ಥಿ ವೃಂದ, ಸಿಬ್ಬಂದಿ ವೃಂದ ಮತ್ತಿತರರು ಉಪಸ್ಥಿತರಿದ್ದರು.
Additional image
18 Mar 2023, 12:20 PM
Category: Kaup
Tags: