ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥಾರೋಹಣ ಸಂಪನ್ನ
Thumbnail
ಪಡುಬಿದ್ರಿ : ಇತಿಹಾಸ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವದ ಪ್ರಯುಕ್ತ ಮಾ. 21ರಂದು ಮಧ್ಯಾಹ್ನ ರಥಾರೋಹಣ ಮತ್ತು ರಾತ್ರಿ ಶ್ರೀಮನ್ಮಹಾರಥೋತ್ಸವ ಸಂಪನ್ನಗೊಂಡಿತು. ವರ್ಷಾವಧಿ ಉತ್ಸವದ ಧಾರ್ಮಿಕ ವಿಧಿವಿಧಾನಗಳು ಶ್ರೀ ಕ್ಷೇತ್ರದ ತಂತ್ರಿಗಳಾದ ವೇದ ಮೂರ್ತಿ ಕಂಬ್ಳಕಟ್ಟ ಶ್ರೀ ಶಿವರಾಜ ರಾಧಾಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಜರಗಿದವು. ನಿತ್ಯಪೂಜೆ, ನಿತ್ಯಬಲಿ, ಪಲ್ಲಪೂಜೆ, ರಥಶುದ್ಧಿಗಳ ಬಳಿಕ ರಥಾರೋಹಣ ನಡೆಯಿತು. ಮಧ್ಯಾಹ್ನ ಸಹಸ್ರಾರು ಮಂದಿ ಅನ್ನಪ್ರಸಾದವನ್ನು ಸ್ವೀಕರಿಸಿದರು. ರಾತ್ರಿ ಶ್ರೀಮನ್ಮಹಾರಥೋತ್ಸವ, ಭೂತಬಲಿ, ಕವಾಟಬಂಧನ ಇತ್ಯಾದಿಗಳು ನೆರವೇರಿದವು. ಅನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಬೀಡು ರತ್ನಾಕರ ರಾಜ ಅರಸು ಕಿನ್ಯಕ್ಕ ಬಲ್ಲಾಳ್ ಮತ್ತು ಪಿ. ಭವಾನಿಶಂಕರ ಹೆಗ್ಡೆ ಹಾಗೂ ದೇವಸ್ಥಾನದ ಅರ್ಚಕರಾದ ಎಚ್‌. ಪದ್ಮನಾಭ ಭಟ್, ವೈ. ಗುರುರಾಜ ಭಟ್, ದೇವಾಲಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಭಕ್ತರು ಉಪಸ್ಥಿತರಿದ್ದರು.
22 Mar 2023, 10:38 AM
Category: Kaup
Tags: