ಕಾಪು : ಗಾಂಜಾ ಸೇವನೆ ಪ್ರಕರಣ ದಾಖಲು
ಕಾಪು : ಇಲ್ಲಿನ ಠಾಣಾ ವ್ಯಾಪ್ತಿಯ ಉದ್ಯಾವರ ಗ್ರಾಮದ ಸಂಪಿಗೆನಗರ ಕ್ರಾಸ್ ಬಳಿ ಅನುಮಾನಾಸ್ಪದವಾಗಿ ವ್ಯಕ್ತಿಯೋರ್ವ ಕಂಡು ಬಂದಿದ್ದು, ಆತನನ್ನು ಪೋಲಿಸರು ಪರಿಶೀಲಿಸಿದಾಗ ಮಾದಕ ಸೇವನೆಯ ನಶೆಯಲ್ಲಿರುವ ಬಗ್ಗೆ ಅನುಮಾನಗೊಂಡು ವಶಕ್ಕೆ ಪಡೆದುಕೊಂಡಿದ್ದರು.
ಆತನ ಹೆಸರು ಮಹಮ್ಮದ್ ಅನಸ್ ಸಾಹೇಬ (25) ಎಂದು ತಿಳಿಸಿದ್ದು, ಮಣಿಪಾಲದ ಪೊರೆನ್ಸಿಕ್ ವಿಭಾಗದ ವೈದ್ಯರು ಗಾಂಜಾ ಸೇವಿಸಿರುವ ಬಗ್ಗೆ ದೃಢಪಡಿಸಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
