ಬೆಂಗಳೂರು : ಬೈಕ್ ನಿಲ್ಲಿಸುವ ವಿಚಾರ - ಗಲಾಟೆ ಕೊಲೆಯಲ್ಲಿ ಅಂತ್ಯ ; ಕೊಲೆಯಾದ ವ್ಯಕ್ತಿ ಕಾಪುವಿನ ಕುಂಜೂರು ಮೂಲದವರು
ಬೆಂಗಳೂರು : ಇಲ್ಲಿನ ಯಲಹಂಕದ ಅಪಾರ್ಟ್‌ಮೆಂಟ್ ಒಂದರಲ್ಲಿ ಒಂದೇ ರೂಂನಲ್ಲಿ
ವಾಸವಿದ್ದ ಮೂವರ ನಡುವೆ ಬೈಕ್ ನಿಲ್ಲಿಸುವ ವಿಚಾರಕ್ಕೆ ಗಲಾಟೆಯಾಗಿ ಓರ್ವನನ್ನು ಕೊಲೆಗೈದ ಘಟನೆ ಮಾಚ್೯ 29ರಂದು ನಡೆದಿದೆ.
ಯಲಹಂಕದ ಸಾಯಿ ಸಮೃದ್ಧಿ ಅಪಾರ್ಟ್‌ಮೆಂಟ್‌ನ ಒಂದೇ ರೂಂನಲ್ಲಿ
ಜರ್ನಾಧನ್ ಭಟ್ಟ, ಸುಲೇಮಾನ್ ಮತ್ತು ರಿಜ್ವಾನ್ ಎಂಬುವವರು ವಾಸವಾಗಿದ್ದರು. ತಡರಾತ್ರಿ ರೂಂ ನ ಪಕ್ಕದಲ್ಲಿ ಬೈಕ್ ನಿಲ್ಲಿಸುವ ವಿಚಾರಕ್ಕೆ ಸುಲೇಮಾನ್, ರಿಜ್ವಾನ್‌ರವರು ಇಬ್ಬರೂ ಜರ್ನಾಧನ್ ಭಟ್ಟ ರವರೊಂದಿಗೆ ಗಲಾಟೆ ಮಾಡಿ, ಜನಾರ್ಧನ್ ಭಟ್ಟ ರವರ ಕಾಲುಗಳನ್ನು ವೈರ್‌ನಿಂದ ಕಟ್ಟಿ ಮತ್ತು ಬಾಯಿಗೆ ಟೇಪ್ ಹಾಕಿ ಮಾಡಿ ಜರ್ನಾಧನ್ ಭಟ್ಟರವರನ್ನು ಕೊಲೆ ಮಾಡಿ ಸುಲೇಮಾನ್ ಮತ್ತು ರಿಜ್ವಾನ್ ಪರಾರಿಯಾಗಿದ್ದರು.
ಕೊಲೆಯಾದ ವ್ಯಕ್ತಿ ಜರ್ನಾಧನ್ ಭಟ್ಟರವರು ಕಾಪು ತಾಲುಕಿನ ಕುಂಜೂರು ಮೂಲದವರಾಗಿದ್ದಾರೆ.
ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಯ ಸಲುವಾಗಿ ತನಿಖೆ ಕೈಗೊಳ್ಳಲಾಗಿದೆ.
