ಪಲಿಮಾರು : ಆಕಸ್ಮಿಕವಾಗಿ ಕೈಜಾರಿ ಆಯತಪ್ಪಿ ಬಾವಿಗೆ ಬಿದ್ದ ವ್ಯಕ್ತಿ ಮೃತ್ಯು
Thumbnail
ಪಲಿಮಾರು : ಗ್ರಾಮದ ಮಠದ ಬಳಿಯ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕೈಜಾರಿ ಆಯತಪ್ಪಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಕೃಷಿ ಕೆಲಸ ಮಾಡಿಕೊಂಡಿದ್ದ ಭಾಸ್ಕರ ದೇವಾಡಿಗ (60) ಏಪ್ರಿಲ್ 13 ರಂದು ಕೆಲಸ ಮುಗಿಸಿ ಸಂಜೆ ಪಲಿಮಾರು ಪೇಟೆಗೆ ಹೋಗಿ ವಾಪಾಸ್ಸು ಮನೆಗೆ ನಡೆದುಕೊಂಡು ಬರುವಾಗ ಮನೆಯ ಬಳಿ ಕಾಲು ದಾರಿಯ ಬದಿಯಲ್ಲಿ ಇದ್ದ ಗಿರೀಶ್ ಎಂಬುವರ ಆವರಣ ದಂಡೆ ಇರುವ ಬಾವಿಯ ಕುಂದವನ್ನು ಹಿಡಿದು ಮುಂದೆ ಸಾಗುವ ಸಮಯ ಆಕಸ್ಮಿಕವಾಗಿ ಕೈಜಾರಿ ಆಯ ತಪ್ಪಿ ಬಾವಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎಂಬುದಾಗಿ ಮೃತರ ಸಂಬಂಧಿ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
14 Apr 2023, 07:21 PM
Category: Kaup
Tags: