ಉಚ್ಚಿಲ : ಕಾಂಗ್ರೆಸ್ ನ ಗ್ಯಾರಂಟಿ ಕಾಡ್೯ ಚೀನಿ ಸೆಟ್ ರೇಡಿಯೋ ಕತೆಯಂತೆ - ಕೋಟ ಶ್ರೀನಿವಾಸ ಪೂಜಾರಿ
Thumbnail
ಉಚ್ಚಿಲ : ಸಾಮಾಜಿಕ ಜಾಲತಾಣವನ್ನು ಅತ್ಯಂತ ಬಲಿಷ್ಟಗೊಳಿಸಬೇಕಾಗಿದೆ. ಆಡಳಿತಾತ್ಮಕ, ಸೈದ್ಧಾಂತಿಕ ಸಮರ್ಥನೆಗೂ ಸಾಮಾಜಿಕ ಜಾಲತಾಣ ಅನಿವಾರ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಉಚ್ಚಿಲ ಮೊಗವೀರ ಸಭಾಭವನದಲ್ಲಿ ಜರಗಿದ ಮಂಗಳೂರು ವಿಭಾಗದ ಡಿಜಿಟಲ್ ಕಾರ್ಯಕರ್ತರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಈ ಬಾರಿ ಬಿಜೆಪಿ ಪಕ್ಷವು ಟಿಕೆಟ್ ಹಂಚಿಕೆಯಲ್ಲಿ ಐವತ್ತು ಮಂದಿ ಹಿಂದುಳಿದವರಿಗೆ, 30 ಮಂದಿ ಪರಿಶಿಷ್ಟ ಜಾತಿ,18 ಮಂದಿ ಪರಿಶಿಷ್ಟ ಪಂಗಡದವರಿಗೆ ಅವಕಾಶ ನೀಡಿದೆ. ಚುನಾವಣೆ ಗೋಸ್ಕರ ಅಲ್ಲ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೀಸಲಾತಿ ಸಿಗುವಂತೆ ಮಾಡುವುದೇ ಬಿಜೆಪಿಯ ಉದ್ದೇಶ. ಕಾಂಗ್ರೆಸ್ ಪಕ್ಷವನ್ನು ಜನರು ನಂಬುತ್ತಿಲ್ಲ. ಹಾಗಾಗಿ ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದಾರೆ. ಕಾಂಗ್ರೆಸ್ ನ ಗ್ಯಾರಂಟಿ ಕಾಡ್೯ ಚೀನಿ ಸೆಟ್ ರೇಡಿಯೋ ಕತೆಯಂತೆ. ರೆಡಿಯೋ ಹಾಳಾಗುತ್ತದೆ ಎಂದು ಜನ ಕೊಳ್ಳಲು ಗ್ಯಾರಂಟಿ ಕಾಡ್೯ ಕೊಡುತ್ತಿದ್ದ. ಹಾಳಾದ ರೇಡಿಯೋಗೆ ಗ್ಯಾರಂಟಿ ಕಾಡ್೯ ಇದೆ ಎಂದು ಕೊಂಡೊಯ್ದರೆ ಗ್ಯಾರಂಟಿ ಕಾಡ್೯ಗೇ ಗ್ಯಾರಂಟಿ ಇಲ್ಲ ಎನ್ನುತ್ತಿದ್ದ. ಅಂತೆಯೇ ಕಾಂಗ್ರೆಸ್ ನ ಗ್ಯಾರಂಟಿ ಕಾಡ್೯ ಜನರನ್ನು ವಂಚಿಸುವ ಕಾಡ್೯ ಎಂದರು. ಈ ಸಂದರ್ಭ ಕುಯಿಲಾಡಿ ಸುರೇಶ್ ನಾಯಕ್, ಉದಯ ಕುಮಾರ್ ಶೆಟ್ಟಿ, ವಿಕಾಸ್ ಪುತ್ತೂರು, ಸುದರ್ಶನ್, ಸುದೀಪ್ ಶೆಟ್ಟಿ, ರಾಘವೇಂದ್ರ ಠಾಕೂರ್, ಅಜಿತ್ ಕುಮಾರ್, ಜೀತು ಪೂಜಾರಿ, ದೆಹಲಿ ಶಾಸಕ ವಿಜೇಂದ್ರ ಗುಪ್ತ, ಶ್ರೀಕಾಂತ ನಾಯಕ್, ಮಹೇಶ್ ಠಾಕೂರ್ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ವಿಕಾಸ್ ಪುತ್ತೂರು ಡಿಜಿಟಲ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸುಜಾತ ಪ್ರಾರ್ಥಿಸಿದರು. ಮಹೇಶ್ ಪೂಜಾರಿ ಸ್ವಾಗತಿಸಿದರು.
16 Apr 2023, 04:54 PM
Category: Kaup
Tags: