ನಾಳೆ (ಎಪ್ರಿಲ್ 18) : ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ
Thumbnail
ಕಾಪು : ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ, ಶಾಸಕರಾದ ವಿನಯ್ ಕುಮಾರ್ ಸೊರಕೆ ನಾಳೆ ಕಾಪು ತಾಲೂಕು ಕಛೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಅಲ್ಲಿಂದ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಅಲ್ಲಿಂದ ಕಾಲ್ನಡಿಗೆಯಲ್ಲಿ ಕಾಪು ಪೇಟೆಯವರೆಗೆ ಬಂದು ಅಲ್ಲಿ ಸಾರ್ವಜನಿಕ ಸಭೆ ನಡೆಸಿ, ತದನಂತರ ಅಪರಾಹ್ನ ಗಂಟೆ 12.05 ರ ನಂತರ ಕಾಪು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯವರಿಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಪ್ರಕಟನೆ ತಿಳಿಸಿದೆ.
17 Apr 2023, 07:00 PM
Category: Kaup
Tags: