ಕಾಪು : ಗೆಲುವಿನ ನಿರೀಕ್ಷೆಯಲ್ಲಿ ಜನತಾದಳ (ಜಾತ್ಯತೀತ) ಪಕ್ಷ ; ಕುಮಾರಸ್ವಾಮಿ ಯೋಜನೆಗಳೇ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆ
ಕಾಪು : ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಲವಾರು ಜನಪರ ಕಾರ್ಯಗಳ ಮೂಲಕ ರಾಜ್ಯದಲ್ಲಿ ಪ್ರಗತಿ ಕಂಡಿದೆ. ಇವರ ಕಾರ್ಯಗಳೇ ನಮ್ಮ ಕಾಪು ತಾಲೂಕಿನ ಅಭ್ಯರ್ಥಿ ಸಬೀನಾ ಸಮದ್ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ ಹೇಳಿದರು.
ಅವರು ಬುಧವಾರ ಕಾಪು ಜೆಡಿಎಸ್ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಜೆಡಿಎಸ್ ಪಕ್ಷವು ಜನತಾ ಪರ್ವ ಕಾರ್ಯಕ್ರಮದ ಅಡಿಯಲ್ಲಿ ಜನತಾ ಜಲಧಾರೆ, ಜನತಾ ಮಿತ್ರ, ಪಂಚರತ್ನ ಯೋಜನೆಗಳನ್ನು ರೂಪಿಸಿದೆ. ಈ ಬಾರಿ ಜಾತ್ಯಾತೀತ ಜನತಾದಳದ ಅಭ್ಯರ್ಥಿ ಸಬೀನ ಸಮದ್ ಕಾಪುವಿನವರಾಗಿದ್ದು, ಕಾಪು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆಲುವಿನ ನಿರೀಕ್ಷೆಯಿದೆ ಎಂದರು.
ಕಾಪು ಪುರಸಭೆ ವ್ಯಾಪ್ತಿಯಲ್ಲಿ ಯು.ಜಿ.ಡಿ ಮ್ಯಾನ್ ಹೋಲ್ ಅಂಡರ್ ಗ್ರೌಂಡ್ ಡ್ರೈನೇಜ್ ಸಿಸ್ಟಮ್ ಅನುಷ್ಟಾನಕ್ಕೆ ಒತ್ತು, ಹೆಜಮಾಡಿ ಬಂದರು ಶೀಘ್ರ ಕಾರ್ಯ ಮುಗಿಸುವ ಬಗ್ಗೆ, ಪರಿಸರ ಸ್ನೇಹಿ ಉದ್ಯೋಗ ಸೃಷ್ಟಿ, ಕಾಪುವಿನಲ್ಲಿ ಅಗ್ನಿಶಾಮಕ ದಳ ನಿರ್ಮಾಣ, ಕಾಪು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ, ಪುರಸಭೆಯ ಹೆಚ್ಚುವರಿ ಟ್ಯಾಕ್ಸ್ ಕಡಿಮೆ ಮಾಡಲಾಗುತ್ತದೆ. ಕಾಪು ಕ್ಷೇತ್ರಕ್ಕೆ ಆಟದ ಮೈದಾನ ನಿರ್ಮಾಣ, ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಮತ್ತು ಬಸ್ ಸ್ಟ್ಯಾಂಡ್ ನಿರ್ಮಾಣ,
ಪಣಿಯೂರು-ಇನ್ನಂಜೆಯಲ್ಲಿ ರೈಲು ನಿಲುಗಡೆ,
ಕೋಮು ಸೌಹಾರ್ದತೆಗೆ ಧಕ್ಕೆಯಾಗದಂತೆ ಸರ್ವರಿಗೂ ಸಮಾನ ಅವಕಾಶವನ್ನ ಮಾಡಿಕೊಡುವ ನಿಟ್ಟಿನಲ್ಲಿ ಪಕ್ಷ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದರು.
ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ಅಭ್ಯರ್ಥಿ ಸಬೀನ ಸಮದ್,ಕಾರ್ಯಾಧ್ಯಕ್ಷ ವಾಸುದೇವ ರಾವ್,ರಾಜ್ಯ ಕಾರ್ಯದರ್ಶಿ ಸುಧಾಕರ್ ಶೆಟ್ಟಿ, ಮುಖಂಡರಾದ ಇಕ್ಬಾಲ್ ಅತ್ರಾಡಿ,ಜಯರಾಮ ಆಚಾರ್ಯ, ಭರತ್ ಶೆಟ್ಟಿ, ಸಂಜಯ್,ಉಮೇಶ್ ಕರ್ಕೇರ, ಚಂದ್ರಹಾಸ ಎರ್ಮಾಳ್,ಇಬ್ರಾಹಿಂ, ರಝಾಕ್ ಕರೀಂ ಹಾಗೂ ಫೈಝನ್ ಉಪಸ್ಥಿತರಿದ್ದರು.
