ಕಾಪು : ಇಬ್ಬರು ಪಕ್ಷೇತರರಿಂದ ನಾಮಪತ್ರ ವಾಪಾಸ್ ; 5 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ
ಕಾಪು : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು ಕಾಪು ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಇಬ್ಬರು ಪಕ್ಷೇತರರು ನಾಮಪತ್ರ ವಾಪಾಸ್ ಪಡೆದಿದ್ದಾರೆ.
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಅಬ್ದುಲ್ ರಝಾಕ್ ಶಾಬನ್ ಅಹ್ಮದ್ ಮತ್ತು ಅಬ್ದುಲ್ ರಹಿಮಾನ್ ನಾಮಪತ್ರ ವಾಪಾಸ್ ಪಡೆದಿದ್ದಾರೆ.
ಅಂತಿಮವಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಮತ್ತು ಎಸ್ಡಿಪಿಐ ಪಕ್ಷದ 5 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ
