ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ ಸಿಡಿಲು ಆ್ಯಪ್
Thumbnail
ಉಡುಪಿ : ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ. ಸಿಡಿಲು-ಮೊಬೈಲ್ ಆ್ಯಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿಂದದೂರವಿರಬೇಕು. ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತುಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು. ಗೃಹಪಯೋಗಿ ಉಪಕರಣಗಳ ಫ್ಲಗ್ಗಳನ್ನು ತೆಗೆದಿಡಬೇಕು. ಗೋಡೆಯಿಂದವದೂರವಿರುವುದು ಉತ್ತಮ. ಒಣ ಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ಸ್ನಾನ ಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು. ಹೊರಾಂಗಣದಲ್ಲಿದ್ದಾಗ ಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು. ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು. ಮಕ್ಕಳು ಈ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸಬಾರದು. ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿಕಂಬಗಳಿಂದ ವಾಹನವನ್ನು ದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಸೂಕ್ತ. ಬಸ್ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು. ಕಾಡಿನಲ್ಲಿದ್ದ ಸಂದರ್ಭದಲ್ಲಿ ಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯಬೇಕು. ಗುಂಪಿನಲ್ಲಿದ್ದಾಗ ಜನರಿಂದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
28 Apr 2023, 04:15 PM
Category: Kaup
Tags: