ಉಡುಪಿ : ಆಯುಷ್ಮಾನ್ ಕಾರ್ಡ್ ಇದ್ದಲ್ಲಿ ಖಾಸಗಿ ಆಸ್ಪತ್ರೆಯಲ್ಲೂ ಕೊರೊನ ಚಿಕಿತ್ಸೆ
Thumbnail
ಉಡುಪಿ ಜುಲೈ 7 (ಕರ್ನಾಟಕ ವಾರ್ತೆ): ರಾಜ್ಯ ಸರಕಾರದ ಆದೇಶದಂತೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ, ಖಾಸಗಿ ಆಸ್ಪತ್ರೆಗಳಲ್ಲಿ ಸಹ ಕೋವಿಡ್ 19 ಸೋಂಕಿತರು ಚಿಕಿತ್ಸೆಯನ್ನು ಪಡೆಯಬಹುದಾಗಿದ್ದು, ಇದಕ್ಕಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹೊಂದಿರಬೇಕಾಗುತ್ತದೆ. ಇದನ್ನು ಬಿಪಿಎಲ್, ಎಪಿಎಲ್ ಹಾಗೂ ಕಾರ್ಡ್ ಇಲ್ಲದವರು ಸಹ ಸೇರಿದಂತೆ, ವಿವಿಧ ಸರ್ಕಾರಿ ನೌಕರರಿಗೆ ಈ ಕಾರ್ಡ್ ಪಡೆಯಲು ಅವಕಾಶವಿರುತ್ತದೆ. ಆದ್ದರಿಂದ ಸಾರ್ವಜನಿಕರು ಸದರಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಮಾಡಿಸಿಕೊಳ್ಳಲು, ನಿಮ್ಮ ಹತ್ತಿರದ ಸೇವಾ ಸಿಂಧು ಕೇಂದ್ರದಲ್ಲಿ ಕಾಗದದ ಪ್ರತಿ 10 ರೂ ಹಾಗೂ ಸ್ಮಾರ್ಟ್ ಕಾರ್ಡ್ ಪ್ರತಿಗೆ 35 ರೂ ಪಾವತಿಸಿ ಪಡೆದುಕೊಳ್ಳಬಹುದು, ಹೆಚ್ಚಿನ ಮಾಹಿತಿಗಾಗಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸುವAತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
07 Jul 2020, 07:03 PM
Category: Kaup
Tags: