ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ಕಟಪಾಡಿ : ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾದ ಬೆಂಬಲ ನೀಡಿಲ್ಲ
ಕಾಪು : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ವೇಳೆಯಲ್ಲಿ ಪಡು ಕುತ್ಯಾರು
ಮಹಾ ಸಂಸ್ಥಾನಕ್ಕೆ ಅನೇಕ ಮಂದಿ ಅಭ್ಯರ್ಥಿಗಳು ಆಗಮಿಸಿ, ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದ್ದಾರೆ.
ಹೆಚ್ಚಿನ ಉಮೇದ್ವಾರರ ಪರಿಚಯ ಇರುವುದರಿಂದ ಎಲ್ಲರೊಡನೆ ಕುಶಲೋಪರಿ, ವಿಚಾರ ವಿನಿಮಯ ನಡೆಸಿ ಶುಭವಾಗಲಿ ಎಂದು ಆಶೀರ್ವದಿಸಿ ಅನುಗ್ರಹ ಮಂತ್ರಾಕ್ಷತೆಯನ್ನು ಜಗದ್ಗುರುಗಳವರು ನೀಡಿರುತ್ತಾರೆ.
ಇದನ್ನು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿ ತಮಗೇ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾ ವರದಿ, ಸಮೂಹ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದಲ್ಲಿ ಆನೆಗುಂದಿ ಮಹಾಸಂಸ್ಥಾನವು ಜವಾಬ್ದಾರರಾಗುವುದಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ.
ಹಾಗೆಯೇ ಜಗದ್ಗುರುಗಳವರು ಮಹಾ ಸಂಸ್ಥಾನದ ವತಿಯಿಂದ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾದ ಬೆಂಬಲ ನೀಡಿಲ್ಲ, ಆಶ್ವಾಸನೆಯನ್ನು ನೀಡಿಲ್ಲ ಅಲ್ಲದೆ ನಿರ್ದಿಷ್ಟ ಪಕ್ಷವನ್ನು ಬೆಂಬಲಿಸಬೇಕು ಎನ್ನುವ ಕರೆಯನ್ನೂ ಸಮಾಜಕ್ಕೆ ನೀಡಿಲ್ಲ.
ಹಾಗೆ ಏನಾದರೂ ಪತ್ರಿಕೆಗಳಲ್ಲಿ, ಸಮೂಹ ಮಾದ್ಯಮಗಳಲ್ಲಿ ಪ್ರಕಟವಾಗಿದ್ದಲ್ಲಿ ಅದು ಅವರ ವೈಯುಕ್ತಿಕ ಅಭಿಪ್ರಾಯ ಅಲ್ಲದೆ ಇದಕ್ಕೆ ಆನೆಗುಂದಿ ಮಹಾ ಸಂಸ್ಥಾನವು ಜವಾಬ್ದಾರಿ ಅಲ್ಲ ಎಂದು ಈ ಮೂಲಕ ಸ್ಪಷ್ಟೀಕರಣ ನೀಡುತ್ತಿದ್ದೇವೆ ಎಂದು ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ.ಬಿ. ಆಚಾರ್. ಕಂಬಾರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
