ಕಾಪು : ಗೆಲುವಿನ ಸಂಭ್ರಮಾಚರಣೆ - ನೂತನ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ರೋಡ್ ಶೋ
Thumbnail
ಕಾಪು : ನೂತನ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿಯವರ ರೋಡ್ ಶೋ ಕಾರ್ಯಕ್ರಮ ಶನಿವಾರದಂದು ಬಿಜೆಪಿ ಪಕ್ಷದ ಪ್ರಮುಖರ ಉಪಸ್ಥಿತಿಯಲ್ಲಿ ಬೆಳಿಗ್ಗೆ ಪಡುಕೆರೆಯಿಂದ ಆರಂಭವಾಯಿತು. ತದನಂತರ ಉದ್ಯಾವರ, ಕಟಪಾಡಿ, ಶಿರ್ವ, ಮುದರಂಗಡಿ, ಅಡ್ಡೆ, ಪಲಿಮಾರು, ನಂದಿಕೂರು, ಪಡುಬಿದ್ರಿ, ಹೆಜಮಾಡಿ, ಎರ್ಮಾಳು, ಅದಮಾರು, ಕಾಪು ಹೀಗೆ ಕ್ಷೇತ್ರದೆಲ್ಲೆಡೆ ಸಾಗಿ ಈ ದಿನದ ರೋಡ್ ಶೋ ಶಿರ್ವ ವ್ಯಾಪ್ತಿಯ ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ಸಮಾಪನಗೊಳ್ಳಲಿದೆ. ನೂತನ ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಶಾಸಕ ಲಾಲಾಜಿ ಆರ್, ಮೆಂಡನ್, ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿ.ಪಂ. ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾ.ಪಂ. ಉಪಾಧ್ಯಕ್ಷೆ ಯಶೋಧ ಪೂಜಾರಿ, ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ಪಾಂಡುರಂಗ ಕರ್ಕೇರ, ಪ್ರಾಣೇಶ್ ಹೆಜಮಾಡಿ, ಶರಣ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.
Additional image
20 May 2023, 05:56 PM
Category: Kaup
Tags: