ಉಡುಪಿ : ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆ ಸಹಾಯಕ ಆಯುಕ್ತರಾಗಿ ಪ್ರಶಾಂತ್ ಕುಮಾರ್ ಶೆಟ್ಟಿ ನೇಮಕ
ಉಡುಪಿ : ಜಿಲ್ಲೆಯ ವಿವಿಧ ದೇವಳಗಳಲ್ಲಿ ಆಡಳಿತ ಕಾರ್ಯನಿರ್ವಹಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಕುಮಾರ್ ಶೆಟ್ಟಿ ಪ್ರಸ್ತುತ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಉಡುಪಿ ಜಿಲ್ಲಾ ಸಹಾಯಕ ಆಯುಕ್ತರಾಗಿ ಮುಂಭಡ್ತಿ ಪಡೆದಿದ್ದಾರೆ.
ಇವರು ಕಾಪು ಹೊಸ ಮಾರಿಗುಡಿ ದೇವಳದ ಕಾರ್ಯನಿರ್ವಹಣಾಧಿಕಾರಿಯಾಗಿ ಉತ್ತಮವಾಗಿ
ಸೇವೆ ಸಲ್ಲಿಸಿದ್ದರು.
ಇವರ ಉತ್ತಮ ಸೇವೆಯು ಹೀಗೆಯೇ ಮುಂದುವರೆಯಲಿ ಎಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಸಿಬ್ಬಂದಿ ವರ್ಗ ಮತ್ತು ಅಭಿವೃದ್ಧಿ ಸಮಿತಿ ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ.
