ಕಾಪು : ಶಾಸಕರಿಂದ ಗುದ್ದಲಿ ಪೂಜೆ
Thumbnail
ಕಾಪು : ಇಲ್ಲಿನ ಪುರಸಭೆ ವ್ಯಾಪ್ತಿಯ ಹಳೆ ಎಂ.ಬಿ.ಸಿ. ರಸ್ತೆಯಲ್ಲಿ ಮಳೆಯಿಂದ ಹಾನಿಗೊಳಗಾದ ಭಾಗದ ಡಾಂಬರೀಕರಣ ಕಾಮಗಾರಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು. 40 ಲಕ್ಷ ರೂಪಾಯಿಗಳ ಅಂದಾಜು ವೆಚ್ಚದ ಕಾಮಗಾರಿಯಾಗಿದೆ. ಈ ಸಂದರ್ಭ ಅನಿಲ್ ಕುಮಾರ್, ಸಂದೀಪ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಸುವರ್ಣ, ಗಂಗಾಧರ ಸುವರ್ಣ, ಸ್ಥಳೀಯರು, ಪಕ್ಷದ ಪ್ರಮುಖರು ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
30 May 2023, 11:42 AM
Category: Kaup
Tags: