ಕಾಪು : ಮುದರಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿಗೆ ಅಭಿನಂದನೆ
Thumbnail
ಕಾಪು : ಭಾರತೀಯ ಜನತಾ ಪಾರ್ಟಿ ಮಹಾಶಕ್ತಿ ಕೇಂದ್ರ ಮುದರಂಗಡಿ ಇದರ ವತಿಯಿಂದ ಜೂನ್ 7ರಂದು ಮುದರಂಗಡಿಯ ಸ್ಪಂದನ ಸಭಾಭವನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮುದರಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯೋಗಿಣಿ ಶೆಟ್ಟಿ, ಮುದರಂಗಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವರಾಮ್ ಭಂಡಾರಿ, ಮುದರಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಹಿರಿಯರಾದ ಗಂಗಾಧರ ಶೆಟ್ಟಿ, ಸಮಾಜ ಸೇವಕರಾದ ವಿಶ್ವನಾಥ ಶೆಟ್ಟಿ ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
08 Jun 2023, 11:06 AM
Category: Kaup
Tags: