ಕಾಪು : ಮೂಳೂರಿನಲ್ಲಿ ಕಡಲ ಕೊರೆತ ತೀವ್ರ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಧಿಕಾರಿಗಳ ಭೇಟಿ
Thumbnail
ಕಾಪು : ತಾಲೂಕಿನ ಮೂಳೂರು ತೊಟ್ಟಂ ಪ್ರದೇಶದಲ್ಲಿ ಕಡಲ ಕೊರೆತ ತೀವ್ರಗೊಂಡಿದ್ದು, ಗುರುವಾರ ಸಂಜೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕಡಲ ಕೊರೆತ ವೀಕ್ಷಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಈ ಬಗ್ಗೆ ಇಲಾಖಾ ಅಧಿಕಾರಿಗಳಿಗೆ ತುರ್ತು ಸ್ಪಂದಿಸುವಂತೆ ಮನವಿ ಮಾಡುತ್ತೇವೆ. ಈ ಬಗ್ಗೆ ಶುಕ್ರವಾರ ಸಂಜೆ ಉಚ್ಚಿಲಕ್ಕೆ ಆಗಮಿಸಲಿರುವ ಮೀನುಗಾರಿಕಾ ಬಂದರು ಸಚಿವರ ಗಮನಕ್ಕೆ ತರಲಾಗುವುದು. ಬರುವ ವಾರದಲ್ಲಿ ಬರುವ ವಿಧಾನ ಸಭೆಯ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡುತ್ತೇನೆ ಎಂದು ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಬಂದರು ಮತ್ತು ಮೀನುಗಾರಿಕಾ ಇಲಾಖೆ ಅಧಿಕಾರಿಗಳು ಕಾಪು ಪುರಸಭಾ ಅಧಿಕಾರಿ ಸಂತೋಷ್ ಕುಮಾರ್, ಮುಖ್ಯ ಇಂಜಿನಿಯರ್ ನಯನ ತಾರಾ ಮತ್ತಿತರ ಅಧಿಕಾರಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
Additional image
15 Jun 2023, 08:58 PM
Category: Kaup
Tags: