ಕಟಪಾಡಿ : ತ್ರಿಶಾ ಕ್ಲಾಸಸ್ - ಸಿ .ಎ. ಫೌಂಡೇಷನ್ ವಿದ್ಯಾರ್ಥಿಗಳ ಮಾಹಿತಿ ಕಾರ್ಯಗಾರ
Thumbnail
ಕಟಪಾಡಿ : ಸಿ.ಎ ಸಿ.ಎಸ್ ಮುಂತಾದ ವೃತ್ತಿಪರ ಕೋರ್ಸ್ ಗಳ ತರಬೇತಿ ನೀಡುತ್ತಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿ.ಎ. ಫೌಂಡೇಷನ್ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ಇಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ ಎ ಗೋಪಾಲ ಕೃಷ್ಣಭಟ್ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿ. ಎ. ತರಬೇತಿ ಪಡೆಯುವ ವಿದ್ಯಾರ್ಥಿಗಳನ್ನು ಕುರಿತು ಸರಿಯಾದ ಯೋಜನೆ ಹಾಗೂ ಛಲ ಬಿಡದ ಪ್ರಯತ್ನದಿಂದ ಮಾತ್ರ ಸಾಧನೆ ಸಾಧ್ಯ. ಸಫಲತೆಯ ಶಿಖರ ಏರಲು ಕಷ್ಟ ಪಟ್ಟು ಕೆಲಸ ಮಾಡುವುದೊಂದೇ ಹಾದಿ ಎಂದು ಹೇಳಿ, ಸಿ. ಎ. ಕೋರ್ಸಿನ ಬಗ್ಗೆ, ‘ಐ.ಸಿ.ಎ.ಐ’ನ ಹೊಸತಾಗಿ ತಿದ್ದುಪಡಿಯಾದ ನಿಯಮಗಳ ಬಗ್ಗೆ ಮತ್ತು ಪರೀಕ್ಷಾಪೂರ್ವ ತಯಾರಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಿದ್ಧಾಂತ್ ಫೌಂಡೇಶನ್ ನ ಖಜಾಂಚಿಯಾದ ನಮಿತಾ ಜಿ.ಭಟ್, ತ್ರಿಶಾ ವಿದ್ಯಾ ಕಾಲೇಜಿನ ಸಿಬ್ಬಂದಿ ವರ್ಗದವರು, ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗೌರಿ ಕಾಮತ್ ನಿರೂಪಿಸಿ ವಂದಿಸಿದರು.
25 Jun 2023, 02:58 PM
Category: Kaup
Tags: