ಉಡುಪಿ : ಯಕ್ಷಗಾನ ಗುರು, ಭಾಗವತ ತೋನ್ಸೆ ಜಯಂತ ಕುಮಾರ್ ವಿಧಿವಶ
Thumbnail
ಉಡುಪಿ : ಯಕ್ಷ ಗುರು, ಸವ್ಯಸಾಚಿ, ಯಕ್ಷ ವಾರಿಧಿ ಬಿರುದಾಂಕಿತ ತೋನ್ಸೆ ಜಯಂತ ಕುಮಾರ್ ಇಂದು ಮುಂಜಾನೆ ವಿಧಿವಶರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. 1946ರಲ್ಲಿ ತೋನ್ಸೆಯವರು ಚೇತನ ಪ್ರೌಢಶಾಲೆ, ಹಂಗಾರಕಟ್ಟೆಯಲ್ಲಿ ಕಛೇರಿ ಅಧೀಕ್ಷಕರಾಗಿ ನಿವೃತ್ತರಾಗಿದ್ದರು. ಆದರೆ ಯಕ್ಷಗಾನದಲ್ಲಿ ಸದಾ ಪ್ರವೃತ್ತರು. ಸಂಚಾರಿ ಯಕ್ಷಗಾನ ಭಂಡಾರವೆಂದೇ ಖ್ಯಾತರಾಗಿದ್ದ ತೋನ್ಸೆ ಕಾಂತಪ್ಪ ಮಾಸ್ತರರ ಸುಪುತ್ರರಾಗಿದ್ದ ಇವರಿಗೆ ತಂದೆಯೇ ಯಕ್ಷಗಾನ ಗುರು, ವೇಷದಾರಿಯಾಗಿ, ಯಕ್ಷಗಾನ ಗುರುಗಳಾಗಿ ಈ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಉಡುಪಿ ಶಾಸಕರ ನೇತೃತ್ವದ ಯಕ್ಷಶಿಕ್ಷಣ ಟಸ್ಟ್ ನಲ್ಲಿ ಆರಂಭದಿಂದಲೂ ಗುರುಗಳಾಗಿ ಅದರ ಯಶಸ್ಸಿಗೆ ಕಾರಣರಾಗಿದ್ದರು. ಅವರು ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಶ್ರೀರಾಮ ವಿಠಲ ಪ್ರಶಸ್ತಿ, ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿದಂತೆ ನೂರಾರು ಪ್ರಶಸ್ತಿಗೆ ಭಾಜನರಾಗಿದರು. ಶ್ರೀ ಭಗವತಿ ತೀಯಾ ಸಮಾಜ ನೇಜಾರು ಇದರ ಮಾಜಿ ಅಧ್ಯಕ್ಷರಾಗಿದ್ದರು. ಅವರು ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ.
26 Jun 2023, 12:00 PM
Category: Kaup
Tags: