ಕಾಪು : ಮಟ್ಟಾರುವಿನಲ್ಲಿ ಬಾಲ ಸಂಸ್ಕಾರ ಕೇಂದ್ರ ಉದ್ಘಾಟನೆ
Thumbnail
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ಘಟಕದ ವತಿಯಿಂದ ಮಟ್ಟಾರಿನಲ್ಲಿ ಬಾಲ ಸಂಸ್ಕಾರ ಕೇಂದ್ರವನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಟ್ಟಾರು ಇದರ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ವಿಶ್ವ ಹಿಂದೂ ಪರಿಷದ್ ಮಟ್ಟಾರು ಇದರ ಅಧ್ಯಕ್ಷರಾದ ಜಗದೀಶ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದುರ್ಗಾವಾಹಿನಿ ದಕ್ಷಿಣ ಪ್ರಾಂತ ಪ್ರಮುಖ್ ಸುರೇಖಾ ರಾಜ್ ಬಾಲ ಸಂಸ್ಕಾರ ಕೇಂದ್ರದ ಅವಶ್ಯಕತೆಯ ಬಗ್ಗೆ ಮಾತನಾಡಿದರು. ಮಾತೃಶಕ್ತಿ ಉಡುಪಿ ಜಿಲ್ಲಾ ಪ್ರಮುಖ್ ಪೂರ್ಣಿಮಾ ಸುರೇಶ್, ಕಾಪು ಪ್ರಖಂಡ ಪ್ರಮುಖ್ ವಾಣಿ ಆಚಾರ್ಯ, ದುರ್ಗಾವಾಹಿನಿ ಕಾಪು ಪ್ರಖಂಡ ಸಂಚಾಲಕಿ ನೀಕ್ಷಿತಾ ಪೂಜಾರಿ, ಬಜರಂಗದಳ ಮಟ್ಟಾರು ಸಂಚಾಲಕ ಸುರೇಶ ಆಚಾರ್ಯ, ಮಾತೃಶಕ್ತಿ ಪ್ರಮುಖ್ ಸುಮತಿ ಸಾಲ್ಯಾನ್, ದುರ್ಗಾವಾಹಿನಿ ಸಂಚಾಲಕಿ ಶ್ವೇತಾ ರಾವ್, ಬಾಲ ಸಂಸ್ಕಾರ ಪ್ರಮುಖ್ ಪವಿತ್ರಾ ಮಡಿವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಅಧ್ಯಕ್ಷರಾದ ಜಯಪ್ರಕಾಶ್ ಪ್ರಭು ಪ್ರಸ್ತಾವನೆಗೈದರು. ಪ್ರಖಂಡ ಸಹ ಕಾರ್ಯದರ್ಶಿ ವಿಖ್ಯಾತ್ ಭಟ್ ಸ್ವಾಗತಿಸಿದರು. ಹರೀಶ್ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿ, ರಂಜಿತ್ ಶೆಟ್ಟಿ ವಂದಿಸಿದರು.
Additional image
02 Jul 2023, 09:10 PM
Category: Kaup
Tags: