ಶಿರ್ವ : ಸಂತ ಮೇರಿ ಮಹಾವಿದ್ಯಾಲಯ - ವಿಶ್ವ ಪ್ಲಾಸ್ಟಿಕ್ ಮುಕ್ತ ದಿನಾಚರಣೆ
ಶಿರ್ವ : ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ವಿಶ್ವ ಪ್ಲಾಸ್ಟಿಕ್ ಮುಕ್ತ ದಿನಾಚರಣೆಯನ್ನು ಏರ್ಪಡಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ಮಾತನಾಡಿ, ಇಂದು ನಾವು ದಿನನಿತ್ಯದ ಜೀವನದಲ್ಲಿ ಕೆಲವು ಅಂಗಡಿಯಿಂದ ಸಣ್ಣಪುಟ್ಟ ವಸ್ತುಗಳನ್ನು ಪ್ಲಾಸ್ಟಿಕ್ ಚೀಲಗಳನ್ನು ಬಳಸಿ ತರುತ್ತಿದ್ದೇವೆ. ಇಂಥ ಪ್ಲಾಸ್ಟಿಕ್ ವಸ್ತುವಿನ ಮರುಬಳಕೆ ಮಾಡಲಾಗದೆ ಅವುಗಳನ್ನು ಎಸೆಯುವುದರಿಂದ ನಮ್ಮ ಮತ್ತು ಪರಿಸರದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತದೆ ಎಂದರು. ಇಂತಹ ಕಾರ್ಯಕ್ರಮ ಹಮ್ಮಿಕೊಂಡ ಕಾಲೇಜಿನ ಎನ್.ಸಿ.ಸಿ ಘಟಕವನ್ನು ಪ್ರಶಂಸಿದರು ಮತ್ತು ಶುಭ ಹಾರೈಸಿದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದಂತ ಐಡಿ ಎಸ್ಎಸ್ಸಿ ಐಜಿಸಿ ಕ್ಯಾಂಪಲ್ಲಿ ಭಾಗವಹಿಸಿದ ಕೆಡೆಟ್ ಪೂಜಾ ಶೆಟ್ಟಿ, ಮೈಸೂರಲ್ಲಿ ನಡೆದಂತ ಏಕ್ ಭಾರತ ಶ್ರೇಷ್ಠ ಭಾರತ್ಕ್ಯಾಂಪಲ್ಲಿ ವಿಜೇತರಾದ ಸೋನಾಲಿಕುಲಾಲ್,ಉಳಿದ್ರಾ ಖುಷಿರವರನ್ನು ಅಭಿನಂದಿಸಲಾಯಿತು ಹಾಗೂ ಕೆಡೆಟ್ಗಳಿಗೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಕರಪತ್ರಗಳನ್ನು ನೀಡಲಾಯಿತು.
ಮಾನವನ ಚಟುವಟಿಕೆಗಳಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟುವುದು ಹಾಗೂ ಪರಿಸರ ಕಾಳಜಿಯ ವಿವಿಧ ವಿಷಯಗಳ ಬಗ್ಗೆ ಜನಸಾಮಾನ್ಯರಿಗೆ ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸುವಲ್ಲಿ ಯುವಕರು ಭಾಗವಹಿಸಿ ಪ್ಲಾಸ್ಟಿಕ್ ಮುಕ್ತ ಪರಿಸರದ ನಿರ್ಮಾಣಮಾಡಲು ಶ್ರಮಿಸಬೇಕೆಂದು ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕರೆ ನೀಡಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು ಮತ್ತು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಫಸ್ಟ್ ಆಫೀಸರ್ ಜಾನ್ ವಿಲಿಯಂ ವೇಗಸ್, ಲ್ಲ್ಯಾನ್ಸ್ ಕಾರ್ಪೊರಲ್ ಅನೀಶ್ ಭಟ್, ಮತ್ತು ಕೆಡೆಟ್ಗಳು ಉಪಸ್ಥಿತರಿದ್ದರು.
ಕ್ಯಾಡೆಟ್ಗಳಾದ ವಿಶಾಲ್ ಟೆರೆನ್ಸ್ ವಾಜ್ ಹಾಗೂ ಆಲಿಸ್ಟರ್ ಸುಜಾಯ್ ಡಿಸೋಜ ಸಹಕರಿಸಿದರು. ಕೆಡೆಟ್ ಕೃತಿಕಾ ಸ್ವಾಗತಿಸಿ , ಲ್ಲ್ಯಾನ್ಸ್ ಕಾರ್ಪೊರಲ್ ಶೆಟ್ಟಿಗಾರ್ ಹೇಮಾಶ್ರೀ ಸುದರ್ಶನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅದಿತಿ ಆಚಾರ್ಯ ವಂದಿಸಿದರು. ಕೆಡೆಟ್ ಪೂಜಾ ಕಾರ್ಯಕ್ರಮವನ್ನು ನಿರೂಪಿಸಿದರು.
