ಕಾಪು : ಮೂಡುಬೆಳ್ಳೆಯಲ್ಲಿ ಟೀಂ ಭಗ್ವ ಯುವಕರ ತಂಡದ ಉದ್ಘಾಟನೆ
Thumbnail
ಕಾಪು : ಸಮಾಜದಲ್ಲಿರುವ ಅಶಕ್ತ ಕುಟುಂಬಕ್ಕೆ ನೆರವಾಗಲು, ಹಿಂದುತ್ವಕ್ಕೆ ಧಕ್ಕೆಯಾದಲ್ಲಿ ಪ್ರತಿಭಟಿಸಲು, ಸಮಾಜದಹಿತಕ್ಕಾಗಿ ಹಿಂದೂ ಸಮಾಜದ ಪರವಾಗಿ ಟೀಂ ಭಗ್ವ ಎಂಬ ಯುವಕರ ತಂಡವೊಂದು ರಚನೆಗೊಂಡಿದ್ದು ತಂಡದ ಉದ್ಘಾಟನೆಯನ್ನು ಜುಲೈ 5 ರಂದು ಮೂಡುಬೆಳ್ಳೆಯಲ್ಲಿ ಕಾಪು ಉದ್ಯಮಿ ಸುಧೀರ್ ಸೋನು ಹಾಗೂ ಸಂಘಟನೆಯ ಪ್ರಮುಖರಾದ ವಿಖ್ಯಾತ್ ಭಟ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಭಗ್ವ ತಂಡದ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ಉಪಸ್ಥಿತರಿದ್ದರು. ಕಲ್ಯ ಯೋಗೀಶ್ ಶೆಟ್ಟಿ ಸ್ವಾಗತಿಸಿದರು. ಮೂಳೂರು ಶ್ರವಣ್ ದೇವಾಡಿಗ ವಂದಿಸಿದರು.
06 Jul 2023, 07:14 PM
Category: Kaup
Tags: