ಉಡುಪಿ : ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿ ವೇತನ ಪ್ರಶಸ್ತಿಗೆ ನೇಹಾ ಹೊಳ್ಳ ಆಯ್ಕೆ
Thumbnail
ಉಡುಪಿ‌ : ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದ, ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಬೇತಿ ಕೇಂದ್ರ (ಸಿ ಸಿ ಆರ್ ಟಿ) ನಡೆಸಿದ , 2020-2021 ಭಾರತದ ಯುವ ಪ್ರತಿಭಾ ಶೋಧದಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಯುವ ಪ್ರತಿಭೆ, ವಿದ್ಯಾರ್ಥಿ ವೇತನ ಪ್ರಶಸ್ತಿಗೆ, ಉಡುಪಿ ಜಿಲ್ಲೆಯಿಂದ ಏಕೈಕ ಅಭ್ಯರ್ಥಿಯಾಗಿ ಮಣೂರು ಗ್ರಾಮದ ನೇಹಾ ಹೊಳ್ಳ ಆಯ್ಕೆಯಾಗಿದ್ದಾರೆ. ಇವರು ಮಣೂರು ಡಾ ಎಂ ವಿ ಹೊಳ್ಳ , ಶಾರದಾ ಹೊಳ್ಳ ಇವರ ಪುತ್ರಿ .ಇವರು ಕಳೆದ 9 ವರ್ಷಗಳಿಂದ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಇವರ ಬಳಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತವನ್ನು ಅಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ 2023 ಮಾರ್ಚ್ ನಲ್ಲಿ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ವಿಭಾಗದ ಸೀನಿಯರ್ ಪರೀಕ್ಷೆಯನ್ನು ಉನ್ನತ ಶ್ರೇಣಿಯಲ್ಲಿ ಮುಗಿಸಿರುತ್ತಾರೆ.
12 Jul 2023, 08:08 PM
Category: Kaup
Tags: