ದ.ಕ, ಉಡುಪಿ ಸಹಿತ ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಉಡುಪಿ : ಹವಾಮಾನ ಇಲಾಖೆ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು
ಮುನ್ಸೂಚನೆ ನೀಡಿದ್ದು, ಆರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಗಂಟೆಗೆ 40–45 ಕಿ.ಮೀ.ನಿಂದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
