ಕಾರ್ಕಳ : ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್ ಆಯ್ಕೆ
Thumbnail
ಕಾರ್ಕಳ : ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ, ಕೋಶಾಧಿಕಾರಿಯಾಗಿ ಕೆ.ಎಂ ಖಲೀಲ್ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರಿಯೆ ತಾಲೂಕು ಪ್ರವಾಸಿ ಕೇಂದ್ರದಲ್ಲಿ ಬುಧವಾರ ಜರುಗಿತು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ  ರಾಜೇಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲ್, ರಜತ ಸಮಿತಿ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್  ಮಾರ್ಪಳ್ಳಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಉಪಾಧ್ಯಕ್ಷರಾಗಿ ಹರೀಶ್ ಸಚ್ಚರಿಪೇಟೆ, ಜತೆ ಕಾರ್ಯದರ್ಶಿಯಾಗಿ ವಾಸುದೇವ ಭಟ್ , ಕ್ರೀಡಾ ಕಾರ್ಯದರ್ಶಿ ರಾಂ ಅಜೆಕಾರು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಹರಿಪ್ರಸಾದ್ ನಂದಳಿಕೆ   ಆಯ್ಕೆಗೊಂಡರು. ಜಿಲ್ಲಾ ಉಪಾಧ್ಯಕ್ಷ  ಆರ್. ಬಿ ಜಗದೀಶ್, ಜಿಲ್ಲಾ ಸಮಿತಿ ಪ್ರತಿನಿಧಿ ಉದಯ್ ಮುಂಡ್ಕೂರ್ ಉಪಸ್ಥಿತರಿದ್ದರು.
19 Jul 2023, 07:17 PM
Category: Kaup
Tags: