ಕಾಪು : ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಬೆಟರ್ಮೆಂಟ್ ಕಮಿಟಿ ಸಭೆ
ಕಾಪು : ಸರಕಾರಿ ಪದವಿ ಪೂರ್ವ ಕಾಲೇಜು, ಪಲಿಮಾರು ಇದರ ಕಾಲೇಜು ಬೆಟರ್ಮೆಂಟ್ ಕಮಿಟಿ ಸಭೆ ಜುಲೈ 26ರಂದು ಜರಗಿತು.
ಕಾಪು ವಿಧಾನಸಭಾ ಕ್ಷೇತ್ರದ ಶಾಸಕರು, ಕಾಲೇಜು ಬೆಟರ್ಮೆಂಟ್ ಕಮಿಟಿ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಕಾಲೇಜು ಬೆಟರ್ಮೆಂಟ್ ಕಮಿಟಿ ಉಪಾಧ್ಯಕ್ಷರಾಗಿ ಪ್ರಸಾದ್ ಪಲಿಮಾರ್ ಅವರನ್ನು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾಗಿ ಶೋಭಾ ಅವರನ್ನು ಪುನರ್ ಆಯ್ಕೆ ಮಾಡಲಾಯಿತು.
ಈ ಸಂದರ್ಭ ವಿಜಯಲಕ್ಷ್ಮಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಉಪಾಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಯೇಶ್ ಪೈ, ಸುಜಾತಾ, ಪ್ರವೀಣ್ ಕುಮಾರ್, ರಶ್ಮಿ, ಪ್ರಾಂಶುಪಾಲರಾದ ಗ್ರೇಟ್ಟಾ ಮೋರಸ್ ಹಾಗೂ ಕಾಲೇಜು ಬೆಟರ್ಮೆಂಟ್ ಕಮಿಟಿ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
