ಜುಲೈ 28 : ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ। ಜಯಂತ್ ಪಡುಬಿದ್ರಿ ಸಂಸ್ಮರಣೆ – ದತ್ತಿನಿಧಿ ವಿತರಣೆ ಕಾರ್ಯಕ್ರಮ
Thumbnail
ಕಾಪು : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಪತ್ರಕರ್ತ ದಿ। ಜಯಂತ್ ಪಡುಬಿದ್ರಿ ಸಂಸ್ಮರಣೆ – ದತ್ತಿನಿಧಿ ವಿತರಣೆ ಕಾರ್ಯಕ್ರಮ ಜುಲೈ 28, ಶುಕ್ರವಾರ ಬೆಳಿಗ್ಗೆ ಗಂಟೆ 11.30 ಕ್ಕೆ ಸರಕಾರಿ ಪದವಿ ಪೂರ್ವ ಕಾಲೇಜು, ಪಲಿಮಾರು ಇಲ್ಲಿ‌ ಜರಗಲಿದೆ. ದತ್ತಿನಿಧಿ ವಿತರಣೆ, ದತ್ತಿ ಉಪನ್ಯಾಸವನ್ನು ಜಾನಪದ ಚಿಂತಕರಾದ ಡಾ| ವೈ.ಎನ್. ಶೆಟ್ಟಿ, ಉಪನ್ಯಾಸವನ್ನು‌ ಹಿರಿಯ ಪತ್ರಕರ್ತರಾದ ಪುಂಡಲೀಕ ಮರಾಠೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ‌ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಕುಮಾರ್ ಹೆಜ್ಮಾಡಿ ವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ‌ ತಿಳಿಸಿದ್ದಾರೆ.
27 Jul 2023, 01:04 PM
Category: Kaup
Tags: