ಪಡುಬಿದ್ರಿ : ಬಾಲಕಿಗೆ ಲೈಂಗಿಕ ದೌರ್ಜನ್ಯ ; ಆರೋಪಿಯ ಬಂಧನ
ಪಡುಬಿದ್ರಿ : ಐದರ ಹರೆಯದ ಬಾಲಕಿಗೆ ಬಿಸ್ಕೆಟ್ ಆಸೆ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕೃತ್ಯ ಪಡುಬಿದ್ರಿಯಲ್ಲಿ ನಡೆದಿದೆ.
ಲೈಂಗಿಕ ದೌರ್ಜನ್ಯವೆಸಗಿದ ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ಹಾಝಿಗಂಝ್ ಅಮ್ದಾಹರದ ನಿವಾಸಿ ಆರೋಪಿ ಮುಫೀಜುಲ್ ಶೇಖ್ (26) ಎಂಬಾತನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಪಡುಬಿದ್ರಿಯಲ್ಲಿ ನಿರ್ಮಾಣ ಹಂತದಲ್ಲಿರುವ ಬಹುಮಹಡಿ ವಸತಿ ಸಂಕೀರ್ಣವಾದ ಮಾತಾ ಕನ್ಸ್ಟ್ರಕ್ಷನ್ ನಲ್ಲಿ ಕಾರ್ಮಿಕನಾಗಿರುವ ಆರೋಪಿಯು ಅಲ್ಲಿ ದುಡಿಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯ ದಂಪತಿಯ ಐದು ವರ್ಷದ ಮಗಳನ್ನೇ ಮಧ್ಯಾಹ್ನದ ವೇಳೆ ಅದೇ ಕಟ್ಟಡದ ಮೂರನೇ ಮಹಡಿಯಲ್ಲಿನ ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.
ಬಾಲಕಿಯ ಕೂಗಿಗೆ ಎಚ್ಚೆತ್ತ ಮನೆಮಂದಿಗೆ ವಿಷಯ ತಿಳಿದಿದೆ.
ಬಾಲಕಿಯ ಹೆತ್ತವರು ನೀಡಿದ ದೂರಿನನ್ವಯ ಪಡುಬಿದ್ರಿ ಠಾಣೆಯಲ್ಲಿ ಪೋಕ್ಸೋ ಕಾನೂನಿನನ್ವಯ ಪ್ರಕರಣವನ್ನು ದಾಖಲಿಸಲಾಗಿದೆ.
