ಕಾಪು ಸರ್ಕಾರಿ ಪಾಲಿಟೆಕ್ನಿಕ್ : ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿ ಅವಧಿ ವಿಸ್ತರಣೆ
Thumbnail
ಕಾಪು : ಪ್ರಸಕ್ತ ಸಾಲಿನಲ್ಲಿ ಕಾಪುವಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಾದ ಆಟೋಮೇಷನ್ ಅಂಡ್ ರೋಬೋಟಿಕ್ಸ್ ಹಾಗೂ ಕ್ಲೌಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ವಿದ್ಯಾಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 5 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: 9480773870, 9740842743, 9902405533 ಹಾಗೂ 8050015592 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
27 Jul 2023, 08:02 PM
Category: Kaup
Tags: