ಕಾಪು : ಕಳತ್ತೂರು ಫ್ರೆಂಡ್ಸ್ ಗ್ರೂಪ್ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ
Thumbnail
ಕಾಪು : ಫ್ರೆಂಡ್ಸ್ ಗ್ರೂಪ್ ಕಳತ್ತೂರು ಇವರ ವತಿಯಿಂದ ಇಂದು ಶಿರ್ವ ಕಳತ್ತೂರು ಕುಶಲಶೇಖರ್ ಶೆಟ್ಟಿ ಆಡಿಟೋರಿಯಂನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜರಗಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಶಾಸಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಕಳತ್ತೂರು ಶೇಖರ ಶೆಟ್ಟಿ, ಕಳತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮುಖ್ಯಸ್ಥರಾದ ಕೇಂಜ ಶ್ರೀಧರ ತಂತ್ರಿ, ಶಿರ್ವ ಮಹಿಳಾ ಮಂಡಲ ಮಾಜಿ ಅಧ್ಯಕ್ಷರಾದ ಬಬಿತಾ ಶೆಟ್ಟಿ, ಕಳತ್ತೂರು ಗರಡಿಮನೆ ವಿಶ್ವನಾಥ ಪೂಜಾರಿ, ಕಾಪು ಮಹಿಳಾ ಮಂಡಲ ಅಧ್ಯಕ್ಷರಾದ ಲಕ್ಷ್ಮೀ ಶೆಟ್ಟಿ, ಫೇಂಡ್ಸ್ ಕಳತ್ತೂರು ಗ್ರೂಪ್ ಅಧ್ಯಕ್ಷರಾದ ರಂಗನಾಥ್ ಶೆಟ್ಟಿ, ಕಾಪು ಪೋಲಿಸ್ ಉಪ ನಿರೀಕ್ಷಕರಾದ ಶ್ರೀಶೈಲ ಉಪಸ್ಥಿತರಿದ್ದರು.
Additional image
30 Jul 2023, 04:13 PM
Category: Kaup
Tags: