ಕಾಪು : ಯುವವಾಹಿನಿ ಘಟಕ - ಆಟಿಡೊಂಜಿ ದಿನ, ಕುಟುಂಬ ಸಮ್ಮಿಲನ ಮತ್ತು ವಿದ್ಯಾರ್ಥಿ ವೇತನ ವಿತರಣೆ
ಕಾಪು : ಯುವವಾಹಿನಿ ಕಾಪು ಘಟಕದ ಆಶ್ರಯದಲ್ಲಿ ಆಟಿಡೊಂಜಿ ದಿನ, ಕುಟುಂಬ ಸಮ್ಮಿಲನ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಕಾಪು ಲೈಟ್ ಹೌಸ್ ರೆಸಾಟ್೯ನಲ್ಲಿ ಭಾನುವಾರ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ರಾಜೇಶ್ ಬಿ, ಯುವವಾಹಿನಿ ಸಂಸ್ಥೆ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯವಿರಿಸಿಕೊಂಡು ಹಲವಾರು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿದೆ. ಮುಂದಿನ ದಿನಗಳಲ್ಲಿಯು ಸಂಸ್ಥೆಯ ಚಟುವಟಿಕೆಗಳು ನಿರಂತರವಾಗಿರುತ್ತದೆ ಎಂದರು.
ಸಮ್ಮಾನ/ ವಿದ್ಯಾರ್ಥಿವೇತನ ವಿತರಣೆ : ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ಹೆಜಮಾಡಿ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ರಾಜೇಶ್ ಬಿ ಇವರನ್ನು ಸಮ್ಮಾನಿಸಲಾಯಿತು. ಶಶಿಧರ ಸುವರ್ಣ ಮತ್ತು ಕುಟುಂಬದ ಪ್ರಾಯೋಜಕತ್ವದಲ್ಲಿ ನೀಡಲ್ಪಟ್ಟ ವಿದ್ಯಾರ್ಥಿವೇತನವನ್ನು ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಆಟಿ ಖಾದ್ಯ ವಿಶೇಷ : ಸುಮಾರು 20ಕ್ಕೂ ಅಧಿಕ ಬಗೆಯ ಆಟಿ ವಿಶೇಷತೆಯ ಖಾದ್ಯಗಳನ್ನು ಉಣಬಡಿಸಲಾಯಿತು.
ಯುವವಾಹಿನಿ ಕಾಪು ಘಟಕದ ಅಧ್ಯಕ್ಷರಾದ ಸಚಿನ್ ಉಚ್ಚಿಲ ಅಧ್ಯಕ್ಷತೆಯನ್ನು ವಹಿಸಿದ್ದರು.
ಘಟಕದ ಗೌರವಾಧ್ಯಕ್ಷರಾದ ಪ್ರಭಾಕರ ಪೂಜಾರಿ, ನಿಕಟಪೂರ್ವ ಅಧ್ಯಕ್ಷೆ ಸೌಮ್ಯ ರಾಕೇಶ್, ಘಟಕದ ಮಾಜಿ ಅಧ್ಯಕ್ಷರಾದ ದೀಪಕ್ ಕುಮಾರ್ ಎರ್ಮಾಳು, ಉಪಾಧ್ಯಕ್ಷರುಗಳಾದ ಶಶಿಧರ್ ಸುವರ್ಣ, ಭವಾನಿ ಶೇಖರ್, ಕಾರ್ಯದರ್ಶಿ ಸುಮಿತ್ರ ಉಪಸ್ಥಿತರಿದ್ದರು.
ಯುವವಾಹಿನಿ ಕಾಪು ಘಟಕದ ಅಧ್ಯಕ್ಷರಾದ ಸಚಿನ್ ಉಚ್ಚಿಲ ಸ್ವಾಗತಿಸಿದರು. ಪತ್ರಕರ್ತ ರಾಕೇಶ್ ಕುಂಜೂರು ನಿರೂಪಿಸಿದರು. ನಿಕಟಪೂರ್ವ ಅಧ್ಯಕ್ಷೆ ಸೌಮ್ಯ ರಾಕೇಶ್ ವಂದಿಸಿದರು.
