ಪಡುಬಿದ್ರಿ ಕಡಲ್ಕೊರೆತ ಪ್ರದೇಶಕ್ಕೆ ಸಿ.ಎಂ ಭೇಟಿ ; ಜಿಲ್ಲಾಡಳಿತದಿಂದ ಸ್ಥಳ ಪರಿಶೀಲನೆ
Thumbnail
ಪಡುಬಿದ್ರಿ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಡುಬಿದ್ರಿಯಲ್ಲಿ ಕಡಲ್ಕೊರೆತ ತೀವ್ರಗೊಂಡ ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಲಿದ್ದಾರೆ. ಆ ಪ್ರಯುಕ್ತ ಇಂದು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಪೋಲಿಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೇಂದ್ರ ಮತ್ತು ಜಿಲ್ಲಾಡಳಿತದ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಸಿ ಎಂ ಭೇಟಿ ಹಿನ್ನೆಲೆಯಲ್ಲಿ ಸಿ ಎಂ ಸಾಗುವ ಬೀಚ್ ರಸ್ತೆಯ ಹೊಂಡ ಮುಚ್ಚುವ ಕಾರ್ಯ ನಡೆಸಲಾಗುತ್ತಿದೆ. ಸಮುದ್ರ ಕಿನಾರೆಯಲ್ಲಿ ಪೋಲೀಸರ ಗಸ್ತು ಹಾಕಲಾಗಿದೆ. ಉಡುಪಿ ಜಿಲ್ಲೆಗೆ ಭೇಟಿ ಸಂದರ್ಭ 500 ಅಧಿಕ ಪೋಲಿಸರನ್ನು ನಿಯೋಜಿಸಲಾಗಿದೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ.
Additional image
31 Jul 2023, 08:21 PM
Category: Kaup
Tags: