ಕಾಪು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಗಳ ಸಭೆ
Thumbnail
ಕಾಪು : ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಅಗಸ್ಟ್ 2ರಂದು ಜಿಲ್ಲಾ ಪಂಚಾಯತ್ ಡಾl ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ಜರಗಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿದ್ದರು. ಸಭೆಯಲ್ಲಿ ಸ್ವಚ್ಛ ಭಾರತ್ ಮಿಷನ್, ನರೇಗಾ ಯೋಜನೆ, ಜಲ ಜೀವನ್ ಮಿಷನ್, 14 ಮತ್ತು 15 ನೇ ಹಣಕಾಸು ಯೋಜನೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಆಯುಷ್ ಚಿಕಿತ್ಸಾಲಯ, ಪಶು ಚಿಕಿತ್ಸಾಲಯ, ಕೃಷಿ ಸಂಭಂದಿತ ಯೋಜನೆಗಳು, ಸರಕಾರಿ ಶಾಲೆಗಳ ಮೂಲಭೂತ ಸೌಕರ್ಯ, ಅಂಗನವಾಡಿ ಕೇಂದ್ರ, ಕೊರಗ ಸಮುದಾಯದ ಅಭಿವೃದ್ಧಿಗೆ ಕೈಗೊಂಡ ಯೋಜನೆಗಳು, ಹಾಗೂ ಸಂಪನ್ಮೂಲ ಕ್ರೋಢೀಕರಣ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಮುಖ್ಯ ಯೋಜನಾಧಿಕಾರಿಗಳಾದ ಶ್ರೀನಿವಾಸ್ ರಾವ್ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
02 Aug 2023, 07:01 PM
Category: Kaup
Tags: